ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾಸಗಿಯವರ ಮಡಿಲಿಗೆ ಭೂತ ಬಂಗ್ಲೆ,ಸೈಂಟ್‌ ಮೇರೀಸ್‌ ದ್ವೀಪ

By Staff
|
Google Oneindia Kannada News

ಮಲ್ಪೆ : ಇಲ್ಲಿನ ಭೂತ ಬಂಗ್ಲೆ ಹಾಗೂ ಸೈಂಟ್‌ ಮೇರೀಸ್‌ ದ್ವೀಪವನ್ನು ಖಾಸಗಿಯವರಿಗೆ ಹಸ್ತಾಂತರಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ನಿರ್ಧರಿಸಿದೆ.

ಈ ವಿಷಯವನ್ನು ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷೆ ಮನೋರಮಾ ಮಧ್ವರಾಜ್‌, ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಭೂತ ಬಂಗ್ಲೆಯ ಜೊತೆಗೆ ಸೈಂಟ್‌ ಮೇರೀಸ್‌ ದ್ವೀಪವನ್ನೂ ಖಾಸಗಿಯವರಿಗೆ ವಹಿಸಿಕೊಡಲಾಗುವುದು ಎಂದರು.

ಖಾಸಗೀಕರಣಕ್ಕೆ ಒತ್ತು ನೀಡುವ ಪ್ರವಾಸೋದ್ಯಮ ನೀತಿಯಡಿಯಲ್ಲಿ ನಿಗಮದ ವ್ಯಾಪ್ತಿಗೆ ಬರುವ ಹೋಟೆಲ್‌ಗಳು ಮತ್ತು ಸಾರಿಗೆ ವ್ಯವಸ್ಥೆಯನ್ನೂ ಖಾಸಗಿಯವರಿಗೆ ವಹಿಸಿಕೊಡಲಾಗುವುದು. ಇದರಿಂದ ಪ್ರವಾಸಿಗರಿಗೆ ಹೆಚ್ಚು ಅನುಕೂಲ ಕಲ್ಪಿಸಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಪ್ರವಾಸೋದ್ಯಮ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ. ವಿ. ರವೀಂದ್ರನಾಥ ಠಾಗೋರ್‌ ಹಾಜರಿದ್ದರು.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X