ಎಂ.ಟಿ.ಆರ್.ನ ಸದಾನಂದ ಮಯ್ಯರಿಗೆ ಕೆ.ಎಂ. ಕಾರಂತ ಪ್ರಶಸ್ತಿ
ಕುಂದಾಪುರ : ಖ್ಯಾತ ಪತ್ರಕರ್ತ, ಉದ್ಯಮಿ ದಿವಂಗತ ಕೆ.ಎಂ. ಕಾರಂತರ ಹೆಸರಿನಲ್ಲಿ ನೀಡಲಾಗುವ ಕೊ.ಮ. ಕಾರಂತ ಪ್ರಶಸ್ತಿಗೆ ಈ ಬಾರಿ ಎಂ.ಟಿ.ಆರ್. ಫುಡ್ ಪ್ರಾಡಕ್ಟ್ಸ್ ನಿರ್ದೇಶಕ ಪಿ. ಸದಾನಂದ ಮಯ್ಯ ಆಯ್ಕೆಯಾಗಿದ್ದಾರೆ.
ಸಿದ್ಧ ತಿನಿಸು ಉತ್ಪಾದನೆಯಲ್ಲಿ ಯಶಸ್ವೀ ಪ್ರಯೋಗಗಳನ್ನು ನಡೆಸಿ, ದೇಶ ವಿದೇಶಗಳಿಗೂ ಕನ್ನಡನಾಡಿನ ತಿನಿಸುಗಳ ಪರಿಮಳ ಪಸರಿಸಿದ ಮಯ್ಯರನ್ನು 2001ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಾರಂತ ಪ್ರತಿಷ್ಠಾನದ ಹೇಳಿಕೆ ತಿಳಿಸಿದೆ.
ಪತ್ರಕರ್ತರಾಗಿ, ಬ್ಯಾಂಕರ್ ಆಗಿ ಹಾಗೂ ರಾಷ್ಟ್ರೀಯ ತರಬೇತುದರರಾಗಿದ್ದ ಕಾರಂತರ ಹೆಸರಿನಲ್ಲಿ ಪ್ರತಿಷ್ಠಾನವು 1999ರಿಂದ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ಪ್ರಶಸ್ತಿಗೆ ಯಾವುದೇ ರಂಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಒಬ್ಬರನ್ನು ಪ್ರತಿವರ್ಷ ಆಯ್ಕೆ ಮಾಡುತ್ತದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೌರವ ಕೋಶಾಧಿಕಾರಿಯಾಗಿಯೂ ಸೇವೆ ಸಲ್ಲಿಸಿರುವ ಮಯ್ಯರಿಗೆ ನರಸಿಂಹ ಪ್ರಶಸ್ತಿ , ಭಾರ್ಗವ ಪ್ರಶಸ್ತಿ ಯೇ ಮೊದಲಾದ ಹತ್ತು ಹಲವು ಪುರಸ್ಕಾರಗಳು ಲಭಿಸಿವೆ.
(ಇನ್ಪೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications