ಪಂಡಿತ ಆರ್.ಕೆ.ಬಿಜಾಪುರ್ಅವರಿಗೆ ಸಂಗೀತ ವಿದ್ವಾನ್ ಪುರಸ್ಕಾರ
ಬೆಂಗಳೂರು: ಹಿಂದೂಸ್ಥಾನಿ ವಾದ್ಯ ಸಂಗೀತ ಕ್ಷೇತ್ರದ ಪ್ರಸಿದ್ಧ ಹಾರ್ಮೋನಿಯಂ ಹಾಗೂ ತಬಲಾ ವಿದ್ವಾಂಸ ಪಂಡಿತ ಆರ್.ಕೆ. ಬಿಜಾಪುರ್ ಅವರನ್ನು ಈ ವರ್ಷದ ‘ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಅಕ್ಟೋಬರ್ 25ರಂದು ಮೈಸೂರು ಅರಮನೆ ಮೈದಾನದಲ್ಲಿ ಆರ್. ಕೆ. ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್ ಮಂಗಳವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
1917ರಲ್ಲಿ ಅಥಣಿ ತಾಲ್ಲೂಕಿನ ಕಾಗವಾಡದಲ್ಲಿ ಹುಟ್ಟಿದ ಬಿಜಾಪುರ್, ತಂದೆ ಬಿಜಾಪುರ್ ಕಲೋಪಂತ್ಅವರ ಪ್ರೋತ್ಸಾಹದಿಂದ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟರು. ಹೈದರಾಬಾದ್ ಆಕಾಶವಾಣಿ, ಶಿರಹಟ್ಟಿ ನಾಟಕ ಕಂಪೆನಿ ಮತ್ತು ಎಚ್ಎಂವಿ ಧ್ವನಿ ಸಂಸ್ಥೆಯಲ್ಲಿ ಹಾರ್ಮೋನಿಯಂ ವಾದಕರಾಗಿ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದರು.
ಶ್ರೀರಾಮ ಸಂಗೀತ ವಿದ್ಯಾಲಯದ ಸ್ಥಾಪಿಸಿ, ಸಂಗೀತಾಸಕ್ತರಿಗೆ ಮಾರ್ಗದರ್ಶನ ನೀಡುತ್ತಿರುವ ಆರ್.ಕೆ. ಅವರಿಗೆ ಕರ್ನಾಟಕ ಕಲಾತಿಲಕ ಪ್ರಶಸ್ತಿಯೂ ದೊರೆತಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications