ಕಾಫಿ ಉದ್ಯಮಕ್ಕೂ ಸಹಾಯ ಮಾಡಿ, ಚಿಕ್ಕಮಗಳೂರು ರೈತರ ಮೊರೆ
ಚಿಕ್ಕಮಗಳೂರು : ಕಾಫಿ ಮಾರುಕಟ್ಟೆಯಲ್ಲಿನ ಏರುಪೇರುಗಳಿಂದಾಗಿ ಕಾಫಿ ಉದ್ಯಮದಲ್ಲಿ ಹಿನ್ನಡೆಯುಂಟಾಗಿದ್ದು, ಈ ಕುರಿತು ತಮ್ಮ ಬೇಡಿಕೆಗಳನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಮುಂದಿಡಲು ಜಿಲ್ಲೆಯ ಕಾಫಿ ಮಂಡಳಿಯ ಸದಸ್ಯರು ನಿರ್ಧರಿಸಿದ್ದಾರೆ.
ಸುಷ್ಮಾ ಸ್ವರಾಜ್ ಅವರು ಗುರುವಾರದಂದು ಇಲ್ಲಿನ ಬೀರೂರಿಗೆ ಭೇಟಿ ನೀಡಲಿದ್ದು, ಜಿಲ್ಲೆಯ ಕಾಫಿ ಉದ್ಯಮಿಗಳ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಬಿಜೆಪಿಯ ಅತ್ತಿಕಟ್ಟೆ ಜಗನ್ನಾಥ್ ಬುಧವಾರದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕಾಫಿ ಮಂಡಳಿಯ ಸದಸ್ಯರು ಮತ್ತು ಕೆಜಿಎಫ್ ಆಶ್ರಯದಲ್ಲಿ , ಬೆಳೆಗಾರರ ನಿಯೋಗವೊಂದು ಸುಷ್ಮಾ ಸ್ವರಾಜ್ರೊಂದಿಗೆ ಮಾತುಕತೆ ನಡೆಸಲಿದೆ.
ಮಾರುಕಟ್ಟೆಯಲ್ಲಿ ಕಾಫಿ ಬೆಲೆ ಸ್ಥಿರತೆ ಕಳೆದುಕೊಳ್ಳುತ್ತಿದೆ. ಬೆಳೆಗಾರರಿಗೆ ಬ್ಯಾಂಕ್ಗಳಲ್ಲಿ ನೀಡಿದ ಸಾಲದ ಪುನರ್ ನವೀಕರಣದಿಂದಲೂ ಯಾವುದೇ ಪ್ರಯೋಜನವಾಗಿಲ್ಲ. 35 ವರ್ಷಗಳಷ್ಟು ಹಿಂದಿನ ಸ್ಥಿತಿಗೆ ಕಾಫಿ ಬೆಲೆ ತಲುಪಿದೆ ಎಂದು ಜಗನ್ನಾಥ್ ಹೇಳಿದರು.
ಕಾಫಿ ಮಂಡಳಿಯ ಬೇಡಿಕೆಗಳು :
- ಇತರೆ ಉದ್ಯಮಗಳಂತೆ ಕಾಫಿ ಉದ್ಯಮವೂ ರೋಗಗ್ರಸ್ತ ಎಂದು ಘೋಷಿಸಬೇಕು.
- 1998ರಿಂದೀಚೆಗಿನ ಬ್ಯಾಂಕ್ ಸಾಲ ಮತ್ತು ಬಡ್ಡಿ ಮನ್ನಾ ಮಾಡಬೇಕು.
- ಕಾಫಿ ಬೆಲೆಗೆ ಸ್ಥಿರತೆ ಬರುವವರೆಗೆ ತೆರಿಗೆಗಳನ್ನು ಅಮಾನತಿನಲ್ಲಿಡಬೇಕು .
- ಅಮೆರಿಕಾ ದಾಳಿಯಿಂದ ಉಂಟಾಗಿರುವ ಯುದ್ಧ ಪರಿಸ್ಥಿತಿಯಿಂದಾಗಿ ಕಾಫಿ ಹೊರದೇಶಗಳಿಗೆ ರಫ್ತಾಗುತ್ತಿಲ್ಲ. ಆದ್ದರಿಂದ ಪರಿಸ್ಥಿತಿ ಸರಿಯಾಗುವವರೆಗೆ ಕಾಫಿಗೆ ಬೆಂಬಲ ಬೆಲೆ ಘೋಷಿಸಬೇಕು .
- (ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications