ಕಾಶ್ಮೀರ ಕೊಳ್ಳ : 8 ಮಂದಿ ಉಗ್ರರು +ಮೂವರು ಸೈನಿಕರ ಸಾವು
ಶ್ರೀನಗರ : ಬುಧವಾರ ರಾತ್ರಿಯಿಂದೀಚೆಗೆ ಕಾಶ್ಮೀರ ಕೊಳ್ಳದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಸೈನಿಕರು, 8 ಮಂದಿ ಉಗ್ರರು ಸೇರಿದಂತೆ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಉತ್ತರ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಹರಿಪುರ್ನಲ್ಲಿ ಗುರುವಾರ ನಡೆದ ಘರ್ಷಣೆಗೆ ಮೂವರು ಸೈನಿಕರು ಹಾಗೂ ಮೂವರು ಉಗ್ರರು ಬಲಿಯಾಗಿದ್ದಾರೆ. ಗುರುವಾರ ಮುಂಜಾನೆ ನಡೆದ ಇನ್ನೊಂದು ಪ್ರಕರಣದಲ್ಲಿ - ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಕಾಶ್ಮೀರ ಕೊಳ್ಳದೊಳಗೆ ನುಸುಳಲು ಪ್ರಯತ್ನಿಸಿದ ಇಬ್ಬರು ಪಾಕಿಸ್ತಾನೀಯರು ರಕ್ಷಣಾ ಪಡೆಗಳ ಗುಂಡಿಗೆ ತುತ್ತಾಗಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಬಂಡೀಪುರ ಪ್ರದೇಶದ ಕನನ್-ಬಾಬಾ-ಗುಂಡ್ ಎಂಬಲ್ಲಿ ನಡೆದ ಘರ್ಷಣೆಯಲ್ಲಿ ಕಮಾಂಡರ್ ಇರ್ಫಾನ್ ಅಹ್ಮದ್ ಸೇರಿದಂತೆ ಇಬ್ಬರು ಉಗ್ರರು ಸಾವಿಗೀಡಾಗಿದ್ದಾರೆ. ಇದೇ ಅವಧಿಯಲ್ಲಿ 26 ಕಿಲೋ ತೂಕದ ಆರ್ಡಿಎಕ್ಸ್ ಸ್ಪೋಟಕ, 2 ಎಕೆ ರೈಫಲ್ಸ್ , ಗ್ರೆನೇಡ್ಗಳು, ರಿಮೋಟ್ಗಳು ಸೇರಿದಂತೆ ಭಾರೀ ಪ್ರಮಾಣದ ವಿವಿಧ ಶಸ್ತ್ರಾಸ್ತ್ರಗಳನ್ನು ರಕ್ಷಣಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications