ಚಾಮುಂಡಿ ಕ್ರೀಡಾಂಗಣದಲ್ಲಿ ನ.22ರಿಂದ ಮೈಸೂರು ಐಟಿ.ಕಾಂ
ಮೈಸೂರು : ಈ ಹೊತ್ತು ವಿಶ್ವ ವಿಖ್ಯಾತ ದಸರ ಮಹೋತ್ಸವಕ್ಕೆ ಸರ್ವಸಜ್ಜಾಗಿರುವ ಮೈಸೂರು ಮುಂದಿನ ತಿಂಗಳು ನಡೆಯಲಿರುವ ಐಟಿ.ಕಾಂ ಮೇಳಕ್ಕೆ ಪೂರ್ವ ಸಿದ್ಧತೆಗಳನ್ನು ನಡೆಸಿದೆ. ನವೆಂಬರ್ 22ರಿಂದ 25ರವರೆಗೆ ಇಲ್ಲಿನ ಚಾಮುಂಡಿ ಒಳಾಂಗಣ ಕ್ರೀಡಾಂಗಣದಲ್ಲಿ ಮೈಸೂರುಐಟಿ.ಕಾಂ ಮೇಳ ಜರುಗಲಿದೆ.
ಮುಂದಿನ ದಿನಗಳಲ್ಲಿ ಮೈಸೂರು ನಗರವನ್ನು ಕೂಡ ಮಾಹಿತಿ ತಂತ್ರಜ್ಞಾನ ನಗರಿ ಮಾಡುವ ಉದ್ದೇಶದಿಂದ ಮೈಸೂರಿನ ಕಂಪ್ಯೂಟರ್ ಮಾರಾಟಗಾರರ ಸಂಘ ಕಳೆದ 3 ವರ್ಷಗಳಿಂದ ಐ.ಟಿ. ಮೇಳ ಆಯೋಜಿಸುತ್ತಿದೆ. ಈ ಬಾರಿ ಪೀಸಿ ಕ್ವೆಸ್ಟ್ ನಿಯತ ಕಾಲಿಕದ ಸಹಯೋಗದಲ್ಲಿ 4 ದಿನಗಳ ಕಾಲ ಈ ಸಮಾವೇಶ ನಡೆಯುತ್ತಿದೆ.
ನಗರದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ನಾಗರಿಕ ಸ್ಪಂದನಕ್ಕೆ ಅವಕಾಶ ಕಲ್ಪಿಸುವುದು ಈ ಸಮಾವೇಶದ ಉದ್ದೇಶವಾಗಿದೆ. ಇನ್‌ಫೋಸಿಸ್, ಸಾಫ್ಟ್‌ವೇರ್ ಪ್ಯಾರಾಡಿಮ್ಸ್, ಎಕ್ಸೆಲ್, ಇಂಟೆಲ್, ಎಲ್ ಅಂಡ್ ಟಿ, ವಿಪ್ರೋ ಮೊದಲಾದ ಬೃಹತ್ ಕಂಪನಿಗಳೂ ಈ ಮೇಳದಲ್ಲಿ ಪಾಲ್ಗೊಳ್ಳುತ್ತಿವೆ.
ಈ ವಿಷಯವನ್ನು ಜಿಲ್ಲಾ ಉಸ್ತುವಾರಿ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಸಮಾವೇಶವನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಉದ್ಘಾಟಿಸಲಿದ್ದಾರೆ. ಈ ಮೇಳವು ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಚಿಕ್ಕಮಗಳೂರು ಜನತೆಗೆ ವರವಾಗಿ ಪರಿಣಮಿಸಲಿದೆ ಎಂದೂ ವಿಶ್ವನಾಥ್ ಹೇಳಿದರು.
ಕಳೆದ 4 ವರ್ಷಗ ಅವಧಿಯಲ್ಲಿ ಮೈಸೂರಿನ ಮಾಹಿತಿ ತಂತ್ರಜ್ಞಾನ ಕಂಪನಿಗಳು ಸುಮಾರು 54.8 ಕೋಟಿ ರುಪಾಯಿ ಸಾಫ್ಟ್‌ವೇರ್‌ಗಳನ್ನು ರಫ್ತು ಮಾಡಿವೆ ಎಂದು ಈ ಸಂದರ್ಭದಲ್ಲಿ ಹಾಜರಿದ್ದ ಮೇಳದ ವ್ಯವಸ್ಥಾಪಕ ವೆಂಕಟೇಶ್ ತಿಳಿಸಿದರು.
(ಇನ್‌ಫೋ ವಾರ್ತೆ)
ಮುಖಪುಟ / ಕರ್ನಾಟಕ ಸಿಲಿಕಾನ್ ಕಣಿವೆ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications