ಕನ್ನಡ ಮಾಧ್ಯಮದವರಿಗೆ ಶೇ.5ರಷ್ಟು ಉದ್ಯೋಗ ಮೀಸಲು:ಪರಿಶೀಲನೆ
ಬೆಂಗಳೂರು : ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ, ರಾಜ್ಯ ಸರಕಾರಿ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಶೇ.5ರಷ್ಟು ಮೀಸಲಾತಿ ನೀಡುವ ಬಗ್ಗೆ ರಾಜ್ಯ ಸರಕಾರ ಗಂಭೀರವಾಗಿ ಚಿಂತಿಸುತ್ತಿದೆ.
ಈ ಸಂಬಂಧ ಬರಗೂರು ರಾಮಚಂದ್ರಪ್ಪ ಅವರು ನೀಡಿರುವ ವರದಿಯನ್ನು ಸರಕಾರ ಪರಾಮರ್ಶಿಸುತ್ತಿದ್ದು, ಕನ್ನಡ ಮಾಧ್ಯಮದವರಿಗೆ ಉದ್ಯೋಗ ಮೀಸಲು ನೀಡುವ ವಿಚಾರ ಸರಕಾರದ ಕ್ರಿಯಾತ್ಮಕ ಪರಿಗಣನೆಯಲ್ಲಿದೆ ಎಂದು ಮುಖ್ಯಮಂತ್ರಿ ಕೃಷ್ಣ ತಿಳಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಅವರ, ‘ಸಂಸ್ಕೃತಿ’ ಮತ್ತು ‘ಕಾಂಟೆಸ್ಸಾದಲ್ಲಿ ಕಾವ್ಯ’ ಎಂಬ ಎರಡು ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು, ಈ ಸಂಬಂಧ ಶೀಘ್ರವೇ ಸೂಕ್ತ ನಿರ್ಧಾರ ಪ್ರಕಟಿಸುವ ಭರವಸೆ ನೀಡಿದರು.
ಈಗಾಗಲೇ ವೃತ್ತಿ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮೀಸಲು ನೀಡಲಾಗಿದೆ ಎಂದರು. ಪ್ರಜಾಪ್ರಭುತ್ವದಲ್ಲಿ ಇಂದು ನಾವು ಎದುರಿಸುತ್ತಿರುವ ಸಮಸ್ಯೆಗಳ ಪೈಕಿ ಸಾಂಸ್ಕೃತಿಕ ಕ್ಷೇತ್ರದ ಸವಾಲುಗಳೂ ದೊಡ್ಡದಾಗಿವೆ. ಸಮಾಜ ಸಂಸ್ಕೃತಿಗೆ ಮನುಷ್ಯನೇ ಮುಖ್ಯ. ಸಮಾಜ - ಸಂಸ್ಕೃತಿ ಬಿಟ್ಟು ಮನುಷ್ಯ ಬದುಕಲು ಸಾಧ್ಯವೇ ಇಲ್ಲ ಎಂದು ಬರಗೂರರ ಪುಸ್ತಕ ಸಂಸ್ಕೃತಿಯನ್ನು ವಿಶ್ಲೇಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬರಗೂರರು, ಅಧಿಕಾರಾಸನದಲ್ಲಿ ಕುಳಿತಾದ ಸೃಜನಶೀಲತೆ ಕಳೆದುಕೊಳ್ಳಬಾರದು. ಅಧಿಕಾರಸ್ಥರು ತಮ್ಮ ಒಳ ಎಚ್ಚರ ಕಾಪಾಡಿಕೊಂಡರೆ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಒಳಿತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕವಿ ಜಿ.ಎಸ್. ಶಿವರುದ್ರಪ್ಪ ಅವರು, ಪುಸ್ತಕದೊಂದಿಗೆ ಸಂವಾದ ಮಾಡುವಾಗ ದೊರಕುವ ತೃಪ್ತಿ, ಸಂತೋಷ ಮತ್ತಾವ ಮಾಧ್ಯಮದಲ್ಲೂ ಸಿಗಲಾರದು. ಹೀಗಾಗೇ ಪುಸ್ತಕ ಮಾಧ್ಯಮಕ್ಕೆ ಎಂದೂ ಅಳಿವಿಲ್ಲ ಎಂದು ತಿಳಿಸಿದರು. ಸಚಿವೆ ರಾಣಿ ಸತೀಶ್, ಡಾ. ಕೆ.ವಿ. ನಾರಾಯಣ್ ಸಮಾರಂಭದಲ್ಲಿ ಪಾಲ್ಲೊಂಡಿದ್ದರು.
(ಇನ್‌ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications