ಷೋರೂಂ ಆಗಬೇಕಿದ್ದ ಗೋದಾಮಿಗೆ ಬೆಂಕಿ :50 ಹೀರೋಹೋಂಡಾ ಭಸ್ಮ
ಬೆಂಗಳೂರು : ಹೊಸ ಷೋ ರೂಂ ಪ್ರಾರಂಭಿಸುವ ಉದ್ದೇಶದಿಂದ ಗೋದಾಮೊಂದರಲ್ಲಿ ಸಂಗ್ರಹಿಸಿಡಲಾಗಿದ್ದ ಹೀರೋಹೋಂಡಾ ಮೋಟಾರು ಬೈಕ್ಗಳು ಶನಿವಾರ ರಾತ್ರಿ ಬೆಂಕಿ ಅನಾಹುತದಿಂದ ಸುಟ್ಟು, ಸುಮಾರು 30 ಲಕ್ಷ ರುಪಾಯಿ ನಷ್ಟವಾಗಿದೆ.
ಆರ್.ವಿ ರಸ್ತೆಯ ಮೆಜೆಸ್ಟಿಕ್ ಪ್ಲಾಜಾದ ಮೊದಲನೇ ಮಹಡಿಯಲ್ಲಿ ರಾತ್ರಿ 9.30ರ ಹೊತ್ತಿಗೆ ಇದ್ದಕ್ಕಿಂದ್ದಂತೆ ಬೆಂಕಿ ಹತ್ತಿಕೊಂಡಿತು. ಭದ್ರತಾ ಸಿಬ್ಬಂದಿ ತಕ್ಷಣವೇ ಅಗ್ನಿ ಶಾಮಕ ದಳಕ್ಕೆ ಫೋನಾಯಿಸಿದರು. ದಳದವರು ಕ್ಷಿಪ್ರ ಗತಿಯಲ್ಲೇ ಬಂದರಾದರೂ, ಅಷ್ಟು ಹೊತ್ತಿಗೆ 25ಕ್ಕೂ ಹೆಚ್ಚು ಹೀರೋಹೋಂಡಾಗಳು ಸಂಪೂರ್ಣ ಸುಟ್ಟು ಹೋಗಿದ್ದವು. ಬೆಂಕಿ ನಂದಿಸುವ ಹೊತ್ತಿಗೆ 50 ಹೀರೋಹೋಂಡಾಗಳು ಸುಟ್ಟು ಕರಕಲಾಗಿದ್ದವು.
ಸದ್ಯದಲ್ಲೇ ಅದೇ ಸ್ಥಳದಲ್ಲಿ ಹೊಸ ಷೋರೂಂ ಪ್ರಾರಂಭವಾಗಬೇಕಿತ್ತು. ಗೋದಾಮಿಗೆ ವಿದ್ಯುತ್ ಸಂಪರ್ಕ ಕೂಡ ಇರಲಿಲ್ಲ. ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದು ಇನ್ನೂ ತಿಳಿದಿಲ್ಲ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications