ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

750 ಕೋಟಿ ರು. ವೆಚ್ಚದಲ್ಲಿ ಪೊಲೀಸ್‌ ಪಡೆಗೆ ಆಧುನೀಕರಣ ಯೋಗ

By Staff
|
Google Oneindia Kannada News

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯನ್ನು 750 ಕೋಟಿ ರುಪಾಯಿ ವೆಚ್ಚದಲ್ಲಿ ಆಧುನೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಪ್ರಕಟಿಸಿದ್ದಾರೆ. ನಗರದ ಮೀಸಲು ಪಡೆ ಕವಾಯತು ಮೈದಾನದಲ್ಲಿ ಭಾನುವಾರ ಜರುಗಿದ ಪೊಲೀಸ್‌ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ವಿವಿಧ ಸಂದರ್ಭ ಸನ್ನಿವೇಶಗಳಲ್ಲಿ ಜೀವತೆತ್ತ ಕರ್ತವ್ಯ ನಿರತ ಪೊಲೀಸರ ಸೇವೆಯನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿ ಕೃಷ್ಣ , ಹುತಾತ್ಮ ಪೊಲೀಸರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಪ್ರಸ್ತುತ, ಹಳೆಯ ಹಾಗೂ ನಿಷ್ಪ್ರಯೋಜಕ ಶಸ್ತ್ರಾಸ್ತ್ರಗಳನ್ನು ಪೊಲೀಸ್‌ ಇಲಾಖೆ ಹೊಂದಿದೆ. ಪೊಲೀಸ್‌ ಪಡೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸಲಾಗುವುದು. ಪೊಲೀಸರ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದು ಕೃಷ್ಣ ಹೇಳಿದರು.

ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ವಿ.ವಿ.ಭಾಸ್ಕರ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X