ಹೊಸಪೇಟೆ ಬಂದ್ ನೂರಕ್ಕೆ ನೂರರಷ್ಟು ಯಶಸ್ವಿ, ಶಾಂತಿಯುತ
ಬಳ್ಳಾರಿ: ಹೊಸಪೇಟೆ ತಾಲ್ಲೂಕನ್ನು ಜಿಲ್ಲಾ ಕೇಂದ್ರವಾಗಿ ರೂಪಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಹೊಸಪೇಟೆ ಅಭಿವೃದ್ಧಿ ಪರ ಕ್ರಿಯಾ ಸಮಿತಿ ಅ.22 ರಂದು ನೀಡಿದ ಹೊಸಪೇಟೆ ಬಂದ್ ಕರೆಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು , ಬಂದ್ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿದೆ.
ಸಣ್ಣಪುಟ್ಟ ಕಲ್ಲು ತೂರಾಟದ ಘಟನೆಗಳನ್ನು ಹೊರತುಪಡಿಸಿದರೆ ಬಂದ್ ಸಂಪೂರ್ಣ ಶಾಂತಿಯುತವಾಗಿತ್ತು . ಮುಚ್ಚಿದ ಅಂಗಡಿ ಮುಂಗಟ್ಟುಗಳು, ಬಿಕೋ ಎನ್ನುತ್ತಿದ್ದ ರಸ್ತೆಗಳ ದೃಶ್ಯ ಸಾಮಾನ್ಯವಾಗಿತ್ತು . ಖಾಸಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು . ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರವನ್ನು ನಿಲ್ಲಿಸಲಾಗಿತ್ತು . ಸರ್ಕಾರಿ ಕಚೇರಿಗಳು ಕೂಡ ಕಾರ್ಯ ನಿರ್ವಹಿಸಲಿಲ್ಲ .
ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ಮೆರವಣಿಗೆ ನಡೆಸಿದರು. ಪಟ್ಟಣದಲ್ಲಿನ ರಸ್ತೆಗಳೆಲ್ಲ ತಿಪ್ಪೇಗುಂಡಿಗಳಂತಾಗಿದ್ದು , ರಿಪೇರಿ ಕಾಮಗಾರಿಗಳನ್ನು ತಕ್ಷಣದಿಂದಲೇ ಕೈಗೆತ್ತಿಕೊಳ್ಳುವಂತೆ ಸರ್ಕಾರವನ್ನು ಚಳವಳಿಕಾರರು ಆಗ್ರಹಿಸಿದರು. ರಸ್ತೆಗಳನ್ನು ರಿಪೇರಿ ಮಾಡಿಸದಿದ್ದರೆ ರಾಜ್ಯೋತ್ಸವ ಆಚರಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ ಕನ್ನಡ ಸಂಘಟನೆಗಳು, ರಸ್ತೆ ರಿಪೇರಿ ಆಗುವವರೆಗೂ ಹೊಸಪೇಟೆಯನ್ನು ಹೊಲಸುಪೇಟೆ ಎಂದು ಕರೆಯುವುದಾಗಿ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications