ಇದು ಸಮೃದ್ಧ ದಸರಾ! ಲಕ್ಷ ಜನರನಿರೀಕ್ಷೆಯಲ್ಲಿ ಮಡಿಕೇರಿನಗರ
ಮಡಿಕೇರಿ : ಮೈಸೂರು ದಸರಾ ಸರಳವಾಗಿ ನಡೆಯಲಿರುವುದರಿಂದ ಈ ಬಾರಿಯ ಮಡಿಕೇರಿ ದಸರಾಕ್ಕೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಬರುವ ನಿರೀಕ್ಷೆಯಿದೆಯೆಂದು ಜಿಲ್ಲಾ ದಸರಾ ಸಮಿತಿ ಹೇಳಿದೆ.
ಲಕ್ಷ ಸಂಖ್ಯೆಯ ಪ್ರೇಕ್ಷಕರನ್ನು ಬರಮಾಡಿಕೊಳ್ಳಲು ಮಡಿಕೇರಿ ಸಿದ್ಧವಾಗುತ್ತಿದೆ ಎಂದು ದಸರಾ ಸಮಿತಿಯ ಕಾರ್ಯದರ್ಶಿ ರಾಜೇಂದ್ರ ಸೋಮವಾರ ಹೇಳಿದ್ದಾರೆ. ಜಿಲ್ಲೆಯ ದಸರಾದಲ್ಲಿ ಕೊಡಗು ಸಂಸ್ಕೃತಿ ಸಮೃದ್ಧವಾಗಿ ಪ್ರಕಟಗೊಳ್ಳಲಿದೆ. ಹಿರಿಯ ಕಾಫಿ ಬೆಳೆಗಾರ ಕೆ. ವಿ. ಮಿತ್ತು ಚೆಂಗಪ್ಪ ಅಕ್ಟೋಬರ್ 24ರಂದು ಗಾಂಧಿ ಮೈದಾನದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸುವರು.
ಮರುದಿನ ನಡೆಯಲಿರುವ ಕಾರ್ಯಕ್ರಮಗಳಿಗೆ ಜಿಲ್ಲಾ ಪಂಚಾಯತ್‌ನ ಮುಖ್ಯ ನಿರ್ವಹಣಾಧಿಕಾರಿ ಕೆ. ಎಂ. ಬಲದೇವ ಕೃಷ್ಣ ಚಾಲನೆ ನೀಡುತ್ತಾರೆ. ಅಕ್ಟೋಬರ್ 26ರಂದು ವೈಭವದಿಂದ ನಡೆಯುವ ವಿಜಯದಶಮಿ ಸಾಂಸ್ಕೃತಿಕ ಆಚರಣೆಯನ್ನು ನ್ಯಾಯವಾದಿ ಕೆ. ಎಂ. ಪೊನ್ನಪ್ಪ ಉದ್ಘಾಟಿಸುತ್ತಾರೆ. ಅಂದು ಬೆಳಗ್ಗೆ 10.30ಕ್ಕೆ ಸಚಿವ ಎಂ. ಎಂ. ನಾಣಯ್ಯ ಅವರ ನೇತೃತ್ವದಲ್ಲಿ ನವರಾತ್ರಿ ಸಭಾ ಕಾರ್ಯಕ್ರಮಗಳು ನಡೆಯಲಿವೆ.
ಕೇಂದ್ರ ಸಚಿವ ವಿ. ಧನಂಜಯ ಕುಮಾರ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಸಚಿವ ಡಿ.ಬಿ. ಚಂದ್ರೇಗೌಡ, ಎಚ್. ಸಿ. ಶ್ರೀಕಂಠಯ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್ ಸಮಾರೋಪ ಕಾರ್ಯಕ್ರಮಕ್ಕೆ ಆಗಮಿಸುವರು. ಬೆಂಗಳೂರಿನ ಇಂಚರ ಬಳಗದಿಂದ ರಸಮಂಜರಿಯನ್ನು ವಿಜಯದಶಮಿಯ ಸಂಜೆ ಆಯೋಜಿಸಲಾಗಿದೆ ಎಂದು ರಾಜೇಂದ್ರ ಹೇಳಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications