ಉರ್ದು ವಾರ್ತೆ : ವಸತಿ ಸಚಿವರ ಹೇಳಿಕೆಗೆ ಶೆಟ್ಟರ್ ಖಂಡನೆ
ಬೆಂಗಳೂರು: ಬೆಂಗಳೂರು ದೂರದರ್ಶನ ಕೇಂದ್ರ ಉರ್ದು ವಾರ್ತೆ ಪ್ರಸಾರ ಮಾಡಬೇಕು ಎಂದು ಒತ್ತಾಯಿಸುವ ಮೂಲಕ ರಾಜ್ಯ ವಸತಿ ಸಚಿವ ಖಮರುಲ್ಲಾ ಇಸ್ಲಾಂ ಕೋಮು ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.
ಭಾಷೆ ಮತ್ತು ಮತೀಯ ಭಾವನೆಗಳನ್ನು ಕೆಣಕಿದರೆ ಪರಿಸ್ಥಿತಿ ಪ್ರಕೋಪಕ್ಕೆ ಹೋಗುತ್ತದೆ. ಕೇವಲ ಕೀಳು ಮಟ್ಟದ ತಂತ್ರದಿಂದ ಪ್ರಚಾರ ಗಿಟ್ಟಿಸಲು ನೀಡುವ ಇಂಥ ಹೇಳಿಕೆಗಳು, ರಾಜ್ಯದ ಶಾಂತಿಯನ್ನೇ ಭಂಗಗೊಳಿಸುತ್ತದೆ ಎಂದು ಶೆಟ್ಟರ್ ಹೇಳಿದ್ದಾರೆ. ರಾಜ್ಯದ ಶಾಂತಿಗೆ ಧಕ್ಕೆ ತರುವಂತಹ ಹೇಳಿಕೆ ನೀಡದಂತೆ ತಮ್ಮ ಸಂಪುಟದ ಸಚಿವರನ್ನು ಮುಖ್ಯಮಂತ್ರಿಗಳು ಹತೋಟಿಯಲ್ಲಿಟ್ಟುಕೊಳ್ಳಬೇಕು ಎಂದೂ ಅವರು ಆಗ್ರಹಿಸಿದ್ದಾರೆ.
1994ರಲ್ಲಿ ಉರ್ದು ವಾರ್ತೆ ಪ್ರಸಾರವಾದಾಗ ರಾಜ್ಯದಲ್ಲಿ ಕೋಮು ಗಲಭೆ ಸಂಭವಿಸಿದ್ದು, ಸಚಿವರಿಗೆ ಮರೆತು ಹೋಗಿದೆಯೇ ಎಂದು ಶೆಟ್ಟರ್ ಪ್ರಶ್ನಿಸಿದ್ದಾರೆ. ಸಚಿವರು ಈಗಲಾದರೂ ಬುದ್ಧಿ ಕಲಿಯದಿದ್ದರೆ ಸರಕಾರ ಮುಂದೆ ಪರಿತಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಖಂಡನೆ : ಕನ್ನಡ ಸಂಘರ್ಷ ಸಮಿತಿ, ಬೆಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಖಮರುಲ್ಲಾ ಇಸ್ಲಾಂ ಅವರ ಹೇಳಿಕೆಯನ್ನು ಖಂಡಿಸಿದ್ದು, ಮುಂದೆಂದೂ ಇಂಥ ಕ್ಷುಲ್ಲಕ ಹೇಳಿಕೆ ನೀಡದಂತೆ ಒತ್ತಾಯಿಸಿವೆ.
(ಇನ್‌ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications