ಬಹುಕೋಟಿ ಬೋಪೋರ್ಸ್ ಹಗರಣದ ಆರೋಪಿ ಛಡ್ಡಾ ನಿಧನ
ನವದೆಹಲಿ : 64 ಕೋಟಿ ರುಪಾಯಿಗಳ ಬೋಪೋರ್ಸ್ ಫಿರಂಗಿ ಹಗರಣದ ಪ್ರಮುಖ ಆರೋಪಿಗಳಲ್ಲೊಬ್ಬರಾದ ವಿನ್ ಛಡ್ಡಾ ನವದೆಹಲಿಯ ತಮ್ಮ ನಿವಾಸದಲ್ಲಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು .
ಛಡ್ಡಾ ಅವರ ಸಾವು ಮಂಗಳವಾರ ರಾತ್ರಿ 12.15 ಕ್ಕೆ ಸಂಭವಿಸಿದೆ ಎಂದು ಅನಾಟ್ರೊನಿಕ್ ಗ್ರೂಪ್ ಆಫ್ ಕಂಪನೀಸ್ನ ಜನರಲ್ ಮೇನೇಜರ್ ಶೈಲೇಶ್ ಬಾಬು ಸುದ್ದಿಗಾರರಿಗೆ ತಿಳಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಅಕ್ಟೋಬರ್ 25 ರಂದು ದೆಹಲಿಯ ಲೋಧಿ ರಸ್ತೆಯಲ್ಲಿನ ಚಿತಾಗಾರದಲ್ಲಿ ನಡೆಯಲಿದೆ.
ಛಡ್ಡಾ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದರು. ರಾಜಕೀಯವಾಗಿ ಅತ್ಯಂತ ಸೂಕ್ಷ್ಮವಾದುದೆಂದು ಭಾವಿಸಲಾಗಿರುವ ಬಹುಕೋಟಿ ಬೋಪೋರ್ಸ್ ಹಗರಣದ ಆರೋಪಿಗಳಲ್ಲಿ ಸಾವಿಗೀಡಾಗುತ್ತಿರುವ ಎರಡನೆಯವರು, ಛಡ್ಡಾ . ಕೆಲವು ದಿನಗಳ ಹಿಂದೆ, ಹಗರಣದ ಇನ್ನೊಬ್ಬ ಪ್ರಮುಖ ಆರೋಪಿ ಹಾಗೂ ಮಾಜಿ ರಕ್ಷಣಾ ಕಾರ್ಯದರ್ಶಿ ಎಸ್.ಕೆ.ಭಟ್ನಾಗರ್ ಕ್ಯಾನ್ಸರ್ನಿಂದ ನಿಧನರಾಗಿದ್ದರು.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications