ಸಿಸ್ಕೋದಿಂದ ‘ಕೆರಿಯರ್ ಕನೆಕ್ಷನ್’ ಸೇವೆ ಆರಂಭ
ಬೆಂಗಳೂರು : ಇಂಟರ್ನೆಟ್ನ ನೆಟ್ವರ್ಕಿಂಗ್ನಲ್ಲಿ ವಿಶ್ವಾಗ್ರೇಸರ ಎನಿಸಿರುವ ಸಿಸ್ಕೋ ಸಿಸ್ಟಮ್ಸ್ ಬುಧವಾರ ‘ಭವಿಷ್ಯದ ಸಂಪರ್ಕ’ (ಕೆರಿಯರ್ ಕನೆಕ್ಷನ್) ಎಂಬ ಹೊಸ ಸೇವೆ ಆರಂಭಿಸಿದೆ. ಇದೊಂದು ಅಂತರ್ಜಾಲ ವೇದಿಕೆಯಾಗಿದ್ದು, ಯುವಜನರಿಗೆ ಆಶಾದೀಪವಾಗಲಿದೆ.
ಶಿಕ್ಷಣ ಸಂಸ್ಥೆಗಳು ಮತ್ತು ಸಿಸ್ಕೋ ನೆಟ್ವರ್ಕಿಂಗ್ ಅಕಾಡಮಿ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳನ್ನು ಕೆರಿಯರ್ ಕನೆಕ್ಷನ್ ಸೇವೆಯಡಿ ಬೆಸೆದು, ಇಂಟರ್ನೆಟ್ ಮತ್ತು ನೆಟ್ವರ್ಕಿಂಗ್ ಕ್ಷೇತ್ರದಲ್ಲಿ ಪ್ರತಿಭಾವಂತರಿಗಾಗಿ ಹುಡುಕುತ್ತಿರುವ ಖಾಸಗಿ ಮತ್ತು ಸಾರ್ವಜನಿಕ ಉದ್ದಿಮೆಗಳೊಂದಿಗೆ ಸಂಪರ್ಕ ಒದಗಿಸಿಕೊಡುವುದು ಈ ಸೇವೆಯ ಉದ್ದೇಶವಾಗಿದೆ.
ಅಂತರ್ಜಾಲದ ಸಮುದಾಯಕ್ಕೆ ಇದೊಂದು ವರವಾಗಲಿದೆ ಎಂದು ಸಿಸ್ಕೋ ಪ್ರಕಟಣೆ ತಿಳಿಸಿದೆ. ಈಗಾಗಲೇ ಏಷ್ಯಾದಲ್ಲಿರುವ ಸಿಸ್ಕೋದ 750 ಅಂತರ್ಜಾಲ ಸಂಪರ್ಕಿತ ಅಕಾಡಮಿಗಳಲ್ಲಿ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಪ್ರತಿಭಾವಂತರ ಅನ್ವೇಷಣೆಯಲ್ಲಿರುವ ಸಂಸ್ಥೆಗಳಿಗೆ ಹಾಗೂ ಉತ್ತಮ ಅವಕಾಶ ಬಯಸುವ ಪ್ರತಿಭಾವಂತ ವಿದ್ಯಾರ್ಥಿಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುವ ಸೇತುವಾಗಿ ಸಿಸ್ಕೋ ಕಾರ್ಯ ನಿರ್ವಹಿಸಲಿದೆ. ಈ ಸೇವೆಯು ಹೊಸ ಸಂಚಲನವನ್ನು ಉಂಟು ಮಾಡಿದ್ದು, ನೆಟ್ವರ್ಕಿಂಗ್ ಮತ್ತು ಇಂಟರ್ನೆಟ್ ತಂತ್ರಜ್ಞರ ಬೆಳವಣಿಗೆಗೆ ನೆರವಾಗಲಿದೆ ಎಂದೂ ಪ್ರಕಟಣೆ ಹೇಳಿದೆ.
(ಪಿ.ಟಿ.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications