ದಾಂಡೇಲಿ ಪೇಪರ್ ಮಿಲ್ಸ್ ಮೈದಾನದಲ್ಲಿ ರಾಮಲೀಲಾ ಉತ್ಸವ
ದಾಂಡೇಲಿ : ಇಲ್ಲಿನ ದಾಂಡೇಲಿ ಪೇಪರ್ ಮಿಲ್ ಮೈದಾನದಲ್ಲಿ ಅಕ್ಟೋಬರ್ 26ರಂದು ರಾಮಲೀಲಾ ಉತ್ಸವವನ್ನು ಆಯೋಜಿಸಲಾಗಿದೆ.
ಸಾಮಾನ್ಯವಾಗಿ ಉತ್ತರ ಭಾರತದಲ್ಲಿ ಆಚರಿಸಲಾಗುವ ಈ ಹಬ್ಬ ರಾವಣನ ವಿರುದ್ಧ ರಾಮನ ವಿಜಯೋತ್ಸವದ ಸಂಕೇತ. ದಾಂಡೇಲಿ ಪೇಪರ್ ಮಿಲ್ ಮೈದಾನದಲ್ಲಿ 1960ರಿಂದಲೂ ಈ ಹಬ್ಬವನ್ನು ಆಚರಿಸುತ್ತಾ ಬರಲಾಗುತ್ತಿದೆ. ಈ ಸಂದರ್ಭದಲ್ಲಿ ರಾವಣ, ಕುಂಭಕರ್ಣ, ಮೇಘನಾದ ರಾಕ್ಷಸರ 38ರಿಂದ 42 ಅಡಿ ಎತ್ತರದ ಪ್ರತಿಮೆಗಳನ್ನು ದಹಿಸಿ ಹಬ್ಬ ಆಚರಿಸಲಾಗುತ್ತದೆ. ದೀಪಾವಳಿ ಹಬ್ಬದಷ್ಟೇ ಸಂಭ್ರಮದಲ್ಲಿ ಆಚರಿಸಲಾಗುವ ಈ ಹಬ್ಬದಲ್ಲಿಯೂ ಪಟಾಕಿಗಳ ಭರಾಟೆಯಿರುತ್ತದೆ.
ದಾಂಡೇಲಿಯ ಹತ್ತಿರದ ಊರಿನ ಜನರಿಗೆಲ್ಲ ಇದು ಮಹತ್ವದ ಹಬ್ಬವಾಗಿದ್ದು, ಸುಮಾರು 40 ಸಾವಿರ ಮಂದಿ ವಿಜಯದಶಮಿಯಂದು ದಾಂಡೇಲಿ ಪೇಪರ್ ಮಿಲ್ ಮೈದಾನದಲ್ಲಿ ಸೇರುವ ನಿರೀಕ್ಷೆಯಿದೆ. ದಾಂಡೇಲಿಯ ದೇವರು, ದಾಂಡೇಲಿಯಪ್ಪನ ಜಾತ್ರೆಯೂ ಇದೇ ಸಂದರ್ಭದಲ್ಲಿ ನಡೆಯುವುದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications