ವಿಮಾನ ಅಪಹರಣ ಬೆದರಿಕೆ : ಕರಾವಳಿಯಾದ್ಯಂತ ಬಿಗಿ ಭದ್ರತೆ
ಮಂಗಳೂರು : ಮಂಗಳೂರು ಮತ್ತು ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಇವತ್ತು ಬಿಗಿ ಪೊಲೀಸ್ ಪಹರೆ ಹಾಕಲಾಗಿದೆ.
ಕಾರಣ : ಜಾಗತಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ಯಾವ ರೀತಿಯ ಬೆದರಿಕೆಗಳನ್ನೂ ಲಘುವಾಗಿ ಪರಿಗಣಿಸುವಂತಿಲ್ಲ. ಎಷ್ಟು ಜಾಗರೂಕತೆಯಿಂದ ಇದ್ದರೂ ಕಡಿಮೆಯೇ !
ಮೊನ್ನೆ ಅಕ್ಟೋಬರ್ 23ರ ಮಂಗಳವಾರ ಬಜ್ಪೆಯಿಂದ ವಿಮಾನವೊಂದನ್ನು ಅಪಹರಿಸುವುದಾಗಿ ಬೆದರಿಕೆ ಪತ್ರ ಬಂದಿತ್ತು. ಅಷ್ಟೇ ಅಲ್ಲ, ವಿಧಾನಸೌಧವನ್ನೂ ಉಡಾಯಿಸುವುದಾಗಿ ಬೆದರಿಕೆಕಾರರು ಹೇಳಿಕೊಂಡಿದ್ದರು. ಪೊಲೀಸರಿಗೆ ಮುಟ್ಟಿಸಲಾಗಿದ್ದ ಈ ಅನಾಮಧೇಯ ಬೆದರಿಕೆ ಪತ್ರ ಹುಸಿ ಎಂದು ಈಗಾಗಲೇ ಗೊತ್ತಾಗಿದೆ. ಆದಾಗ್ಯೂ ಮುಂಜಾಗ್ರತೆ ದೃಷ್ಟಿಯಿಂದ ಕರಾವಳಿಯಾದ್ಯಂತ, ವಿಶೇಷವಾಗಿ ಮಂಗಳೂರಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಮಂಗಳೂರು ಬಂದರು, ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆ , ತೈಲಾಗಾರ, ಬಿಎಎಸ್‌ಎಫ್, ಮಂಗಳೂರು ರಸಗೊಬ್ಬರ ಕಾರ್ಖಾನೆ ಸೇರಿದಂತೆ ಜಿಲ್ಲೆಯ ಹಾಗೂ ಸುತ್ತಮುತ್ತಲ ಎಲ್ಲ ಕೈಗಾರಿಕೆ ಹಾಗೂ ಸಂಸ್ಥೆಗಳಿಗೆ ಬಿಗಿ ಭದ್ರತೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಂತ್ ಕುಮಾರ್ ಸಿಂಗ್ ಗುರುವಾರ ನಮ್ಮ ಪ್ರತಿನಿಧಿಗೆ ತಿಳಿಸಿದ್ದಾರೆ.
ವಾಸ್ತವವಾಗಿ ಒಂದು ವಾರದ ಹಿಂದೆಯೇ ಉಡುಪಿಯಿಂದ ಬಂದ ಈ ಪತ್ರ ಬೆಂಗಳೂರು ಪೊಲೀಸರ ಕೈಸೇರಿತ್ತು. ಈ ವಿಷಯವನ್ನು ರಹಸ್ಯವಾಗಿಟ್ಟಿದ್ದ ಪೊಲೀಸರು ಬೆಂಗಳೂರು ಹಾಗೂ ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದರು. ಎಲ್ಲ ಪ್ರಯಾಣಿಕರನ್ನೂ ತಪಾಸಣೆಗೆ ಒಳಪಡಿಸಲಾಗಿತು.
ವಿಮಾನ ಅಪಹರಣ ಬೆದರಿಕೆ ಹಿನ್ನೆಲೆಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಭರೂಚ ಅವರು, ತಮ್ಮ ವಾಯುಯಾನ ರದ್ದು ಪಡಿಸಿ, ಮಂಗಳೂರಿನಿಂದ ಬೆಂಗಳೂರಿಗೆ ರಸ್ತೆ ದಾರಿ ಹಿಡಿದರು. ರಕ್ಷಣೆ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನ ಹಾರಟ ಮಂಗಳವಾರ ಅರ್ಧಗಂಟೆ ತಡವಾಗಿತ್ತು.
ಇಂಗ್ಲಿಷ್‌ನಲ್ಲಿ ಬರೆಯಲಾಗಿರುವ ಬೆದರಿಕೆ ಪತ್ರದಲ್ಲಿ ಡಿಸೋಜಾ ಎಂಬ ಹೆಸರಿದೆ. ಬಜ್ಪೆ ವಿಮಾನ ನಿಲ್ದಾಣದಿಂದ ವಿಮಾನ ಅಪಹರಿಸಿ, ವಿಧಾನಸೌಧ ಸ್ಫೋಟಿಸುವ ಬೆದರಿಕೆಯನ್ನು ಆತ ಹಾಕಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದರು. ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ಪೊಲೀಸ್ ಮಹಾ ನಿರ್ದೇಶಕ ಧರ್ಮಪಾಲ್ ನೇಗಿ ಮಂಗಳೂರಿಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
(ಇನ್‌ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications