ನವೆಂಬರ್ 3ರಿಂದ 5ರವರೆಗೆ ಸುಪ್ರಸಿದ್ಧ ಹಂಪಿ ಉತ್ಸವ
ಬೆಂಗಳೂರು : ವಿಶ್ವವಿಖ್ಯಾತ ಹಂಪಿಯಲ್ಲಿ ನವೆಂಬರ್ 3ರಿಂದ 5ರವರೆಗೆ ಸುಪ್ರಸಿದ್ಧ ಹಂಪಿ ಉತ್ಸವ ನಡೆಯಲಿದೆ. ಈ ವಿಷಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ. ಕೊಟ್ರಪ್ಪ ತಿಳಿಸಿದ್ದಾರೆ. ಉತ್ಸವಕ್ಕೆ ಸಂಬಂಧಿಸಿದ ಆದೇಶವೂ ತಮ್ಮ ಕೈಸೇರಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದರೊಂದಿಗೆ, ಬರದ ಹಿನ್ನೆಲೆಯಲ್ಲಿ ರದ್ದಾಗಿದ್ದ ಹಂಪಿ ಉತ್ಸವಕ್ಕೆ ಮರು ಚಾಲನೆ ದೊರೆತಂತಾಗಿದೆ. ಈ ವರ್ಷ ಮುಂಗಾರು ಕೈಕೊಟ್ಟು, ರಾಜ್ಯದ ಮೇಲೆ ಬರದ ಕಾರ್ಮೋಡ ಕವಿದ ಹಿನ್ನೆಲೆಯಲ್ಲಿ ಮೈಸೂರು ದಸರೆಯನ್ನು ಸರಳವಾಗಿ ಆಚರಿಸಲು ನಿರ್ಧಾರ ತಳೆದ ರಾಜ್ಯ ಸರಕಾರ, ಗಡಿನಾಡ ಉತ್ಸವ, ಹಂಪಿ ಉತ್ಸವ, ಪಟ್ಟದಕಲ್ಲು ಉತ್ಸವ, ಕದಂಬೋತ್ಸವ ಹಾಗೂ ಬನವಾಸಿ ಉತ್ಸವ ರದ್ದು ಪಡಿಸುವ ನಿರ್ಧಾರ ಕೈಗೊಂಡಿತ್ತು.
ಈ ಎಲ್ಲ ಸಾಂಸ್ಕೃತಿಕ ಉತ್ಸವಗಳನ್ನು ಬರದ ಹಿನ್ನೆಲೆಯಲ್ಲಿ ರದ್ದು ಪಡಿಸಿದ ವಿಷಯವನ್ನು ಖುದ್ದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಅವರೇ ಆಗಸ್ಟ್ 24ರಂದು ಪ್ರಕಟಿಸಿದ್ದರು. ಆದರೆ, ರಾಜ್ಯದಲ್ಲಿ ಮುಂಗಾರು ಕೈಕೊಟ್ಟರೂ ಹಿಂಗಾರು ಚುರುಕಾದ ಹಿನ್ನೆಲೆಯಲ್ಲಿ ಸರಕಾರ ತನ್ನ ನಿರ್ಧಾರ ಬದಲಿಸಿದೆ.
ಪ್ರಧಾನ ಉತ್ಸವಗಳನ್ನು ಹೊರತು ಪಡಿಸಿ, ಜಿಲ್ಲಾ ಉತ್ಸವಗಳನ್ನಷ್ಟೇ ನಡೆಸಬೇಕು ಎಂಬ ಇಂಗಿತವನ್ನು ಸರಕಾರ ವ್ಯಕ್ತಪಡಿಸಿತ್ತಾದರೂ, ಜನರ ಸಾಂಸ್ಕೃತಿಕ ಭಾವನೆಗಳಿಗೆ ನೋವು ಮಾಡಲಿಚ್ಛಿಸದ ಸರಕಾರ ಈಗ, ವಿಜಯನಗರದರಸರ ಬಳುವಳಿಯಾದ ಸುಪ್ರಸಿದ್ಧ ಹಂಪಿ ಉತ್ಸವ ಆಚರಣೆಗೆ ಅನುಮತಿ ನೀಡಿದೆ.
(ಇನ್ಫೋ ವಾರ್ತೆ)
ಮುಖಪುಟ / ಮೈಸೂರು ದಸರಾ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications