ಚಿಕ್ಕಮಗಳೂರು ಬಳಿ ಬಸ್ -- ವ್ಯಾನ್ ಡಿಕ್ಕಿ 4 ಜನರ ಸಾವು
ಬೆಂಗಳೂರು : ಬೀರೂರು - ಕಡೂರು ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮದುವೆ ದಿಬ್ಬಣದ ನಾಲ್ವರು ಮೃತಪಟ್ಟಿದ್ದಾರೆ. ಮದುವೆಯ ದಿಬ್ಬಣ ಪ್ರಯಾಣಿಸುತ್ತಿದ್ದ ವ್ಯಾನ್ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಡುವೆ ನಡೆದ ಡಿಕ್ಕಿಯಿಂದ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಮದುವೆಯ ಕಾರ್ಯಕ್ರಮವೊಂದಲ್ಲಿ ಪಾಲ್ಗೊಳ್ಳುವ ಸಲುವಾಗಿ ಟಾಟಾ ಸುಮೋದಲ್ಲಿ ಬಾಗಲಕೋಟೆಯಿಂದ - ಮಡಿಕೇರಿ ಜಿಲ್ಲೆಯ ಕುಶಾಲನಗರಕ್ಕೆ ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ದುರ್ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಅವರನ್ನು ಬೀರೂರು ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಪದ್ಮಾವತಿ (55), ನಂದಾ ಉರುಫ್ ಮಲ್ಲಿಕಾರ್ಜುನ (28), ರಾಮಚಂದ್ರ (50), ದತ್ತಾತ್ರೇಯ (65) ಎಂದು ಗುರುತಿಸಲಾಗಿದೆ. ಬೀರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
(ಪಿ.ಟಿ.ಐ/ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications