ಬಸ್ಸು ಕಾಣದ 5 ಸಾವಿರ ಹಳ್ಳಿಗಳಿಗೆ ಸಚಿವರು ಬಸ್ಸು ಬಿಡ್ತಾರಂತೆ..
ಬೆಂಗಳೂರು : ಕರ್ನಾಟಕದಲ್ಲಿ ವಾಹನ ಸಂಚಾರದ ಸೌಕರ್ಯವೇ ಇಲ್ಲದ 5 ಸಾವಿರ ಹಳ್ಳಿಗಳಿಗೆ ಇನ್ನೊಂದು ವರ್ಷದೊಳಗೆ ಬಸ್ ಓಡಿಸುವುದಾಗಿ ಸಾರಿಗೆ ಸಚಿವ ಸಗೀರ್ ಅಹಮದ್ ಸೋಮವಾರ ಹೇಳಿದ್ದಾರೆ.
ಪ್ರೆಸ್ ಕ್ಲಬ್ ಆಯೋಜಿಸಿದ್ದ ಪತ್ರಿಕಾ ಸಂದರ್ಶನದಲ್ಲಿ ಅವರು ಮಾತಾಡುತ್ತಿದ್ದರು. ಸಾರಿಗೆ ಸಂಪರ್ಕ ಸೇವೆಯಿಂದ ವಂಚಿತವಾಗಿರುವ 5 ಸಾವಿರ ಹಳ್ಳಿಗಳಿಗೆ ರಸ್ತೆಗಳನ್ನು ಸರಿಪಡಿಸಿ, ಬಸ್ ಸಂಚಾರ ಪ್ರಾರಂಭಿಸಲಾಗುವುದು. ಇನ್ನೊಂದು ವರ್ಷದಲ್ಲಿ ಈ ಕೆಲಸ ಆಗಲಿದೆ ಎಂದರು. ಸಾರಿಗೆ ಇಲಾಖೆಯ ಇತರೆ ಕಾರ್ಯಕ್ರಮಗಳನ್ನು ಅವರು ತೆರೆದಿಟ್ಟದ್ದು ಹೀಗೆ...
- ಸಾರಿಗೆ ವ್ಯವಸ್ಥೆ ಸುಧಾರಣೆಗೆ ಸದ್ಯದಲ್ಲೇ ಸರ್ಕಾರ ನೀತಿಯಾಂದನ್ನು ಪ್ರಕಟಿಸಲಿದೆ.
- ರಸ್ತೆ ಅಪಘಾತಗಳಿಗೆ ಚಾಲಕನೊಬ್ಬನನ್ನೇ ಹೊಣೆಯಾಗಿಸುವುದು ತರವಲ್ಲ. ಕೆಟ್ಟು ನಿಂತ ವಾಹನಗಳೂ ಇದಕ್ಕೆ ಕಾರಣವಾಗುತ್ತವೆ. ಈ ಸಮಸ್ಯೆ ಪರಿಹರಿಸಲು ಬಸ್ ಬೇಸ್, ಗೂಡ್ಸ್ ಬೇಸ್ಗಳನ್ನು ನಿರ್ಮಿಸುವ ಬಗೆಗೂ ಪರಿಶೀಲಿಸಲಾಗುತ್ತಿದೆ. ರಸ್ತೆ ಸುರಕ್ಷಾ ಸಮಿತಿ ಸಭೆ ನಡೆಸಿ, ನಿರ್ಣಯ ಕೈಗೊಳ್ಳಲಿದೆ.
- ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮ್ಯಾಕ್ಸಿಕ್ಯಾಬ್ ಸಂಚಾರವನ್ನು ಪೂರ್ಣ ಪ್ರಮಾಣದಲ್ಲಿ ನಿಯಂತ್ರಿಸಲಾಗುವುದು.
- ಬೆಂಗಳೂರಿನ 5 ಆರ್ಟಿಓಗಳನ್ನು ಗಣಕೀಕರಣಗೊಳಿಸುವ ಕೆಲಸ ಜಾರಿಯಲ್ಲಿದೆ. ಇನ್ನೊಂದು ವರ್ಷದೊಳಗೆ ವಾಹನ ಪರವಾನಗಿಯನ್ನು ಇಚ್ಛಿಸಿದ ಜಾಗದಲ್ಲಿ ಪಡೆಯಬಹುದಾದ ವ್ಯವಸ್ಥೆಯನ್ನೂ ಮಾಡಲಾಗುವುದು.
- ದೇಶದಲ್ಲೇ ಅತ್ಯುತ್ತಮ ಸಾರಿಗೆ ಸಂಸ್ಥೆ ಎಂದು ಭೂಸಾರಿಗೆ ಇಲಾಖೆ ಘೋಷಿಸಿ, 5 ಲಕ್ಷ ರುಪಾಯಿ ಬಹುಮಾನವನ್ನೂ ನೀಡಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications