ಪಾಕ್ಗೆ ನಿಯೋಗ ಕಳಿಸಿ: ವಿಶ್ವಸಂಸ್ಥೆಗೆ ಭಾರತೀಯ ಕ್ರಿಶ್ಚಿಯನ್ನರ ಆಗ್ರಹ
ಬೆಂಗಳೂರು: ಪಾಕಿಸ್ತಾನದ ಚರ್ಚೊಂದರಲ್ಲಿ 18 ಕ್ರಿಶ್ಚಿಯನ್ನರನ್ನು ಹತ್ಯೆಗೈದ ಬರ್ಬರ ಕೃತ್ಯದ ಬಗ್ಗೆ ತನಿಖೆ ನಡೆಸಲು ಹಾಗೂ ಪಾಕ್ನಲ್ಲಿನ ಅಲ್ಪಸಂಖ್ಯಾಕರಿಗೆ ರಕ್ಷಣೆ ಒದಗಿಸುವ ಕುರಿತು ಉನ್ನತ ಮಟ್ಟದ ನಿಯೋಗವೊಂದನ್ನು ಪಾಕಿಸ್ತಾನಕ್ಕೆ ಕಳುಹಿಸಲು ಭಾರತೀಯ ಕ್ರಿಶ್ಚಿಯನ್ನರ ಜಾಗತಿಕ ಸಮಿತಿ (Global Council of Indian Christians) ವಿಶ್ವಸಂಸ್ಥೆಯನ್ನು ಒತ್ತಾಯಿಸಿದೆ.
ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೋಫಿ ಅನ್ನಾನ್ ಅವರಿಗೆ ಕಳಿಸಿರುವ ಸಂದೇಶದಲ್ಲಿ , ಕ್ರಿಶ್ಚಿಯನ್ನರ ಹತ್ಯಾ ಪ್ರಕರಣದ ಬಗ್ಗೆ ತೀವ್ರ ದಿಗ್ಭ್ರಮೆ ಹಾಗೂ ಭೀತಿಯನ್ನು ಸಮಿತಿ ವ್ಯಕ್ತಪಡಿಸಿದೆ. ಬೆಹ್ವಾಲ್ಪುರ್-ಮುಲ್ತಾನ್ನ ಚರ್ಚ್ನಲ್ಲಿ ಭಕ್ತರ ಮೇಲೆ ನಡೆದ ದಾಳಿ ಭಯಾನಕವಾದುದು ಎಂದು ಸಮಿತಿ ಬಣ್ಣಿಸಿದೆ.
ಕ್ರಿಶ್ಚಿಯನ್ ಹಾಗೂ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಪಾಕಿಸ್ತಾನ ಆಡಳಿತ ತಳೆದಿರುವ ಶೀತಲ ಮೌನ ನಮಗೆ ನಿರಾಶೆ ಹಾಗೂ ಆಶ್ಚರ್ಯ ಉಂಟು ಮಾಡಿದೆ ಎಂದು ಹೇಳಿರುವ ಕ್ರಿಶ್ಚಿಯನ್ನರ ಸಮಿತಿ, ಪ್ರಕರಣಕ್ಕೆ ಸಂಬಂಧಿಸಿದ ಸತ್ಯಾಂಶಗಳನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮತ್ತು ಸಾಮಾನ್ಯ ಸಭೆಯ ಮುಂದೆ ಮಂಡಿಸುವಂತೆ ಕೋಫಿ ಅನ್ನಾನ್ ಅವರನ್ನು ಒತ್ತಾಯಿಸಿದೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications