ಹುಬ್ಬಳ್ಳಿ, ಬೆಂಗಳೂರಿನಲ್ಲಿ ರೈತಬಜಾರ್ ಸ್ಥಾಪನೆಗೆ ಸಂಪುಟ ನಿರ್ಧಾರ
ಬೆಂಗಳೂರು: ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ರೈತ ಬಜಾರ್ಗಳನ್ನು ಸ್ಥಾಪಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿರುವುದಾಗಿ ವಾರ್ತಾ ಸಚಿವ ಎಂ. ಶಿವಣ್ಣ ತಿಳಿಸಿದ್ದಾರೆ.
ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ನಗರದ ಯಲಹಂಕದ ಬಳಿ 43. 18 ಲಕ್ಷ ರೂಪಾಯಿ ವೆಚ್ಚದಲ್ಲಿ ರೈತ ಬಜಾರ್ನ್ನು ಸ್ಥಾಪಿಸಲಾಗಿದೆ. ಅಲ್ಲಿ ತೋಟಗಾರಿಕೆ ಉತ್ಪನ್ನಗಳನ್ನು ರೈತರು ಮಾರಾಟ ಮಾಡಲು ಸದ್ಯದಲ್ಲಿಯೇ ಅವಕಾಶ ಕಲ್ಪಿಸಲಾಗುವುದು. ಇದರಿಂದ ರೈತ ಮತ್ತು ಗ್ರಾಹಕರ ನಡುವೆ ಮಧ್ಯವರ್ತಿಗಳಿರುವುದಿಲ್ಲ. ಉತ್ಪನ್ನಕ್ಕೆ ಸಿಗುವ ಬೆಲೆ ನೇರವಾಗಿ ರೈತರನ್ನೇ ತಲುಪುತ್ತದೆ ಎಂದು ಶಿವಣ್ಣ ಹೇಳಿದರು.
ಹುಬ್ಬಳ್ಳಿಯಲ್ಲಿಯೂ ರೈತ ಬಜಾರ್ನ್ನು ಶೀಘ್ರದಲ್ಲಿಯೇ ತೆರೆಯಲಾಗುವುದು . ತೋಟಗಾರಿಕೆ ಉತ್ಪನ್ನಗಳನ್ನು ಮಾರುವ ರೈತರಿಗೆ ಉತ್ಪನ್ನಗಳನ್ನು ಮಾರಾಟ ಮಾಡುವ ರೈತರಿಗೆ ಗುರುತಿನ ಚೀಟಿ ನೀಡಲಾಗುವುದು.
ಗ್ರಾಮೀಣಾಭಿವೃದ್ಧಿ ಸಚಿವ ಎಂ. ವೈ. ಘೋರ್ಪಡೆ ಅವರ ನೇತೃತ್ವದ ಸಂಪುಟ ಉಪ ಸಮಿತಿಯು ಆಂಧ್ರ ಪ್ರದೇಶದ ಮಾದರಿಯ ರೈತ ಬಜಾರ್ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರುವ ಬಗ್ಗೆ ಸಚಿವ ಸಂಪುಟಕ್ಕೆ ವರದಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಬೆಂಗಳೂರಿನಲ್ಲಿ ರೈತ ಬಜಾರ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications