ಸದ್ಯಕ್ಕಂತೂ ವಿದ್ಯುತ್ ದರ ಏರಿಕೆ ಪ್ರಸ್ತಾಪ ಇಲ್ಲ : ಇಂಧನ ಸಚಿವ
ಬೆಂಗಳೂರು : ಮುಂಗಾರು ವೈಫಲ್ಯದಿಂದ ನಾಡಿನ ಜನತೆ ತೀವ್ರ ಸಂಕಷ್ಟ ಎದುರಿಸಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಸದಿರಲು ಕರ್ನಾಟಕ ಸರಕಾರ ನಿರ್ಧರಿಸಿದೆ. ಈ ವಿಷಯವನ್ನು ರಾಜ್ಯ ಇಂಧನ ಸಚಿವ ವೀರಕುಮಾರ್ ಪಾಟೀಲ್ ತಿಳಿಸಿದ್ದಾರೆ.
ಮಂಗಳವಾರ ಜರುಗಿದ ಸಂಪುಟ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ವಿದ್ಯುತ್ ದರ ಏರಿಸುವ ಯಾವುದೇ ಪ್ರಸ್ತಾಪ ರಾಜ್ಯ ಸರಕಾರದ ಮುಂದೆ ಇಲ್ಲ ಎಂದೂ ಸ್ಪಷ್ಟಪಡಿಸಿದರು. ಪ್ರಸಕ್ತ ಸನ್ನಿವೇಶದಲ್ಲಿ ವಿದ್ಯುತ್ ಉತ್ಪಾದನೆ ಹಾಗೂ ಬಳಕೆಯಾಗುತ್ತಿರುವ ವಿದ್ಯುತ್ ನಡುವೆ ಭಾರೀ ಅಂತರ ಇದೆ. ಹೀಗಾಗಿ ನೆರೆರಾಜ್ಯಗಳಿಂದ ಹಾಗೂ ಕೇಂದ್ರ ಗ್ರಿಡ್‌ನಿಂದ ವಿದ್ಯುತ್ ಖರೀದಿಗೆ ಮಾತುಕತೆ ನಡೆದಿದೆ ಎಂದರು.
ರಾಜ್ಯದ ವಿದ್ಯುತ್ ಬೇಡಿಕೆಯನ್ನು ಸರಿತೂಗಿಸಲು ಖಾಸಗಿ ಕಂಪನಿಗಳಿಂದ ಕೂಡ ವಿದ್ಯುತ್ ಖರೀದಿ ಮಾಡುವ ಇಂಗಿತವನ್ನು ಸರಕಾರ ಹೊಂದಿದ್ದು, ಮಹಾರಾಷ್ಟ್ರದಲ್ಲಿನ ಎನ್ರಾನ್ ಸೇರಿದಂತೆ, ಇನ್ನಿತರ ಖಾಸಗಿ ಕಂಪನಿಗಳೊಂದಿಗೆ ಕೂಡ ಮಾತುಕತೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಲೋಡ್ ಶೆಡ್ಡಿಂಗ್ ಸಂಭವ: ಪ್ರಸ್ತುತ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಿನದಿಂದ ದಿನಕ್ಕೆ ಏರುತ್ತಿದೆ. ಉತ್ಪಾದನೆ ಕ್ಷೀಣಿಸಿದೆ. ಹೊರಗಿನಿಂದ ವಿದ್ಯುತ್ ಖರೀದಿಸುವ ಪ್ರಯತ್ನವನ್ನೂ ವಿದ್ಯುತ್ ನಿಗಮ ಮಾಡಿದೆ. ಆದಾಗ್ಯೂ ಮುಂದಿನ ದಿನಗಳಲ್ಲಿ ನಗರ ಪ್ರದೇಶಗಳೂ ಕೆಲ ಗಂಟೆಗಳ ಕಾಲ ಕತ್ತಲಲ್ಲಿ ಮುಳುಗುವುದು ಅನಿವಾರ್ಯವಾಗಲಿದೆ. ಈ ವಿಷಯವನ್ನು ನಿಗಮದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯಕ್ಕೆ ಬೆಂಗಳೂರಿನಲ್ಲಿ ವಿದ್ಯುತ್ ಕಡಿತ ಮಾಡುವ ಉದ್ದೇಶ ಪ್ರಸರಣ ನಿಗಮಕ್ಕೆ ಇಲ್ಲ. ಆದರೆ, ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕಿಂತ ಶೇ.40ರಷ್ಟು ಕುಸಿದಿರುವ ಹಿನ್ನೆಲೆಯಲ್ಲಿ, ಹಾಗೂ ವಿದ್ಯುತ್ ಬಳಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಈ ಕ್ರಮ ಅನಿವಾರ್ಯ ಆಗಬಹುದು ಎಂಬ ಸೂಚನೆಯನ್ನು ಅವರು ನೀಡಿದ್ದಾರೆ.
(ಇನ್‌ಫೋ ವಾರ್ತೆ)
ವಾರ್ತಾ ಸಂಚಯ
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications