ರೈತರ ಸಮಸ್ಯೆಗಳಿಗೆ ಸರ್ಕಾರದ ಕೀಳುಮಟ್ಟದ ಸ್ಪಂದನ-ದೇವೇಗೌಡ
ಬೆಂಗಳೂರು : ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸದ ರೈತ ವಿರೋಧಿ ಸರ್ಕಾರ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಟುವಾಗಿ ಟೀಕಿಸಿದ್ದಾರೆ.
ಚನ್ನಪಟ್ಟಣ ತಾಲ್ಲೂಕಿನ ವಿಠಲೇನಹಳ್ಳಿಯಲ್ಲಿ ಪೊಲೀಸರು ನಡೆಸಿದ ಗೋಲಿಬಾರ್ ವಿರೋಧಿಸಿ, ಅಕ್ಟೋಬರ್ 28 ರಿಂದ ದೇವೇಗೌಡರು ವಿಠಲೇನಹಳ್ಳಿಯಿಂದ ಪ್ರಾರಂಭಿಸಿದ ಪ್ರಾಯಶ್ಚಿತ್ತ ಪಾದಯಾತ್ರೆ ಗುರುವಾರ ಬೆಂಗಳೂರಿನಲ್ಲಿ ಕೊನೆಗೊಂಡಿತು. ಮಹಾತ್ಮ ಗಾಂಧಿ ರಸ್ತೆಯಲ್ಲಿನ ಗಾಂಧಿ ಪ್ರತಿಮೆಗೆ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಗೌಡರು, ಕೃಷ್ಣ ಸರ್ಕಾರದ ವಿರುದ್ಧ ಎರಡನೇ ಹಂತದ ಹೋರಾಟದ ವಿವರಗಳನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದರು. ರೈತರ ಸಮಸ್ಯೆಗಳಿಗೆ ಸರ್ಕಾರ ಕೀಳು ಮಟ್ಟದಲ್ಲಿ ಸ್ಪಂದಿಸುತ್ತಿದೆ ಎಂದು ಅವರು ಆರೋಪಿಸಿದರು.
ಇದಕ್ಕೂ ಮುನ್ನ ನೂರಾರು ಅಭಿಮಾನಿಗಳು ಹಾಗೂ ರೈತ ಸಮೂಹದೊಂದಿಗೆ ರಾಜಧಾನಿಯ ಪ್ರಮುಖ ರಸ್ತೆಗಳಲ್ಲಿ ದೇವೇಗೌಡರು ಪಾದಯಾತ್ರೆ ನಡೆಸಿದರು. ಐದು ದಿನಗಳ ಅವಧಿಯಲ್ಲಿ 80 ಕ್ಕೂ ಹೆಚ್ಚು ಕಿಮೀ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದ ದೇವೇಗೌಡ, ಗುರುವಾರ ಬೆಂಗಳೂರು ಪ್ರವೇಶಿಸಿದ ಸಂದರ್ಭದಲ್ಲಿ ವಿಜಯನಗರದ ಶನೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications