ಪ್ರತ್ಯೇಕ ರಾಜ್ಯದ ಮಾತನಾಡುವವರ ಬಗ್ಗೆ ಮುಖ್ಯಮಂತ್ರಿ ಕೃಷ್ಣ ಆಕ್ರೋಶ
(ಇನ್ಫೋ ಇನ್‌ಸೈಟ್)
ಬೆಂಗಳೂರು: ರಾಜ್ಯದ ಕೈ ತಪ್ಪಿದ ಪ್ರದೇಶಗಳು ಕರ್ನಾಟಕಕ್ಕೆ ಪುನರ್‌ಸೇರ್ಪಡೆಯಾಗುವ ಹೊತ್ತಿನಲ್ಲಿ ಪ್ರತ್ಯೇಕ ರಾಜ್ಯದ ಕುರಿತು ಮಾತನಾಡುವ ದುಸ್ಸಾಹಸವನ್ನು ಯಾರೂ ಮಾಡಬಾರದು. ಇಂಥ ಪ್ರಯತ್ನಗಳನ್ನು ಹತ್ತಿಕ್ಕಲಾಗುವುದು ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಹೇಳಿದ್ದಾರೆ.
ಗುರುವಾರ ಬೆಳಗ್ಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ಮಾಡಿ ಅವರು ಮಾತನಾಡುತ್ತಿದ್ದರು. ಭೌಗೋಳಿಕವಾಗಿ ಕನ್ನಡಿಗರೆಲ್ಲರೂ ಒಂದುಗೂಡಿದ್ದಾರೆ. ಮಾನಸಿಕವಾಗಿಯೂ ಕನ್ನಡಿಗರು ಒಟ್ಟಾಗಬೇಕು. ನಾವೆಲ್ಲರೂ ಸೇರಿ ನಾಡನ್ನು ಮುಂದೆ ನಡೆಸೋಣ ಎಂದು ಜನತೆಗೆ ಕೃಷ್ಣ ಕರೆ ನೀಡಿದರು.
ಪ್ರಾದೇಶಿಕ ಅಸಮಾನತೆಯನ್ನು ಸರಿಪಡಿಸಲು ಸರ್ಕಾರ ನೂರಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಹೊತ್ತಿನಲ್ಲಿ ಪ್ರತ್ಯೇಕತೆಯ ಮಾತು ಸಲ್ಲದು ಎಂದು ಕೃಷ್ಣ ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಅಭಿಮಾನ ಸ್ವಯಂ ಪ್ರೇರಿತವಾಗಿರಬೇಕು- ರಾಜ್
ಮಾತೃಭಾಷೆಯ ಮೇಲಿನ ಅಭಿಮಾನ ಸ್ವಯಂ ಪ್ರೇರಿತವಾಗಿರಬೇಕೇ ಹೊರತು, ಅದು ಹೇಳಿಸಿಕೊಳ್ಳುವುದರಿಂದ ಬರುವುದಿಲ್ಲ ಎಂದು ವರನಟ ಡಾ.ರಾಜ್‌ಕುಮಾರ್ ಹೇಳಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯ ಆವರಣದಲ್ಲಿ ಜರುಗಿದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್, ಕನ್ನಡದ ಸ್ಥಾನಮಾನವನ್ನು ಸರ್ಕಾರ ನಿರ್ಧರಿಸಬೇಕು ಎಂದು ಅಭಿಪ್ರಾಯ ಪಟ್ಟರು.
ತಾಯಿ ಮೊದಲ ದೇವರಾದರೆ, ಭಾಷೆ ಎರಡನೇ ದೇವರು. ಭಾಷೆ ಕಣ್ಣಿಗೆ ಕಾಣಿಸುವುದಿಲ್ಲ, ಆದರೆ ಕೇಳಿಸುತ್ತದೆ. ಮಾತೃಭಾಷೆಯನ್ನು ರಕ್ಷಿಸಬೇಕಾದುದು ಎಲ್ಲರ ಕರ್ತವ್ಯ ಎಂದು ರಾಜ್ ಹೇಳಿದರು.
ಮೈಸೂರು, ಧಾರವಾಡಗಳಲ್ಲಿ ರಾಜ್ಯೋತ್ಸವ
ಧಾರವಾಡ : ನಗರದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಎ.ಎಂ. ಹಿಂಡಸಗೇರಿ ಕನ್ನಡ ಬಾವುಟ ಹಾರಿಸಿದರು. ಸರಕಾರವು ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಜಾರಿಗೆ ಸಂಬಂಧಿಸಿದಂತೆ ಬರಗೂರು ವರದಿ ಅನುಷ್ಠಾನಕ್ಕೆ ಸರಕಾರ ಈಗಾಗಲೇ ತಾತ್ವಿಕವಾಗಿ ಒಪ್ಪಿದೆ. ಮುಂದಿನ ವರ್ಷ ವರದಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರು ಹೇಳಿದರು.
ಬಿ.ಎಡ್‌ನಲ್ಲಿ ಕನ್ನಡ ಪಠ್ಯವನ್ನು ಅಳವಡಿಸಿ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು. ರಾಜ್ಯೋತ್ಸವ ಆಚರಣೆಯ ಪ್ರಯುಕ್ತ ಗೃಹ ರಕ್ಷಕ ದಳ, ಪೊಲೀಸ್ ಪಡೆ, ಎನ್.ಸಿ.ಸಿ ಮತ್ತು ಶಾಲಾ ಮಕ್ಕಳಿಂದ ಆಕರ್ಷಕ ಪಥ ಸಂಚಲನ ಏರ್ಪಡಿಸಲಾಗಿತ್ತು.
ಮೈಸೂರು : ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ರಾಣಿ ಸತೀಶ್ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿದೇಶಿಯರಿಗೆ ಕನ್ನಡ ಕಲಿಕೆ ಕ್ಯಾಸೆಟ್ ಹೊರತಂದಿದೆ. ಇದರಿಂದ ಕನ್ನಡ ಕಲಿಯುವುದು ಸುಲಭವಾಗುತ್ತದೆ ಎಂದರು.
ಶುಭ ಹಾರೈಕೆ-
ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ವಿವಿಧ ಗಣ್ಯರು ಕನ್ನಡಿಗರಿಗೆ ಶುಭ ಕೋರಿದ್ದಾರೆ. ಸುಂದರ ರಾಜ್ಯವನ್ನು ಸಂಪದ್ಭರಿತ ನಾಡನ್ನಾಗಿ ಮಾಡಲು ನಾವೆಲ್ಲರೂ ಶ್ರಮಿಸೋಣ ಎಂದು ರಾಜ್ಯಪಾಲರಾದ ವಿ.ಎಸ್. ರಮಾದೇವಿ ಕರೆಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷಾಧ್ಯಕ್ಷ ಅಲ್ಲಂ ವೀರಭದ್ರಪ್ಪ, ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ, ಸಾರಿಗೆ ಸಚಿವ ಸಗೀರ ಅಹ್ಮದ್, ಕೊಡಗಿನ ಎಂ.ಎಂ. ನಾಣಯ್ಯ ಕನ್ನಡಿಗರಿಗೆ ರಾಜ್ಯೋತ್ಸವ ಶುಭಾಶಯಗಳನ್ನು ತಿಳಿಸಿರುವ ಪ್ರಮುಖರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications