ತುಳುನಾಡ ಅಬ್ಬಕ್ಕ ಉತ್ಸವಕ್ಕೂ ಬರೆ.. ಅಯ್ಯೋ ಬರವೇ..
ಮಂಗಳೂರು : ರಾಜ್ಯದ ಹಲವು ಪ್ರದೇಶದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಬಾರಿಯ ತುಳುನಾಡ ವೀರರಾಣಿ ಅಬ್ಬಕ್ಕ ಉತ್ಸವವನ್ನು ರದ್ದು ಪಡಿಸಲಾಗಿದೆ.
ಈ ವಿಷಯವನ್ನು ಉಳ್ಳಾಲದ ಅಬ್ಬಕ್ಕ ಉತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ. ಕಳೆದ ನಾಲ್ಕು ವರ್ಷಗಳಿಂದ ವೀರರಾಣಿ ಅಬ್ಬಕ್ಕ ಉತ್ಸವ ನಡೆಯುತ್ತ ಬಂದಿದೆ. ಆದರೆ ಅದಕ್ಕೆ ಸರಕಾರದ ಕಡೆಯಿಂದ ಅಂತಹ ಪ್ರೋತ್ಸಾಹವೇನೂ ಸಿಕ್ಕಿಲ್ಲ. ನಾಡಿನಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯದ ಇತರ ಕಡೆಗಳಲ್ಲಿ ನಡೆಯಬೇಕಿದ್ದ ಉತ್ಸವಗಳನ್ನು ರದ್ದುಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಬ್ಬಕ್ಕ ಉತ್ಸವವನ್ನೂ ಕೈಬಿಡಲು ನಿರ್ಧರಿಸಲಾಗಿದೆ ಎಂದು ಉತ್ಸವದ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಎಂ. ಇದಿನಬ್ಬ ಹೇಳಿದ್ದಾರೆ.
ಐದನೇ ವರ್ಷದ ಉತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಬೇಕೆಂದು ಸಮಿತಿ ನಿರ್ಧರಿಸಿತ್ತು, ಅಬ್ಬಕ್ಕ ಪ್ರಶಸ್ತಿ ಆಯ್ಕೆಗೆ ಮತ್ತು ಸ್ಮರಣ ಸಂಚಿಕೆಗಳಿಗೆ ಸಾಹಿತಿ ಬಿ.ಎ. ವಿವೇಕ ರೈ ಮತ್ತು ಡಾ. ಅಮೃತ ಸೋಮೇಶ್ವರ ಅವರ ನೇತ್ತುತ್ವದಲ್ಲಿ ತಯಾರಿ ನಡೆದಿತ್ತು.
(ಇನ್ಫೋ ವಾರ್ತೆ)
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications