‘ಸಾಧಕರ ಹೆಸರು ಕಳಿಸಿಕೊಡಿ, ನಾವು ಗೌರವಿಸುತ್ತೇವೆ’-ಕೃಷ್ಣ
ಬೆಂಗಳೂರು : ಇಂದು ರಾಜ್ಯೋತ್ಸವ ಬಂದಿದೆ. ಕನ್ನಡಾಭಿಮಾನ ರಾಜ್ಯದ ಮೂಲೆ ಮೂಲೆಯಲ್ಲಿಯೂ ವ್ಯಕ್ತವಾಗುತ್ತಿದೆ. ಆದರೆ ಇದೇ ಅಭಿಮಾನ, ಕನ್ನಡ ನಿಷ್ಠೆ ವರ್ಷವಿಡೀ ಇರಬೇಕು ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಕನ್ನಡಿಗರಿಗೆ ಕಿವಿ ಮಾತು ಹೇಳಿದ್ದಾರೆ.
ಅವರು ಗುರುವಾರ ಸಂಜೆ ರವೀಂದ್ರಕಲಾ ಕ್ಷೇತ್ರದಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾನಾಡುತ್ತಿದ್ದರು. ವರ್ಷಪೂರ್ತಿ ಕನ್ನಡ ಪ್ರೀತಿ ತೋರುವ ದೀಕ್ಷೆ ತೊಡಬೇಕು ಎಂದ ಮುಖ್ಯಮಂತ್ರಿಗಳು ಪ್ರಶಸ್ತಿಗಳ ಬಗ್ಗೆ ಮಾತನಾಡುತ್ತಾ ಈ ವರ್ಷ ವಿಶೇಷವಾಗಿ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸುವ ಪ್ರಯತ್ನ ನಡೆದಿದೆ ಎಂದರು.
ಸಾಧಕರನ್ನು ಸನ್ಮಾನಿಸುವ ಸಂಪ್ರದಾಯ ನಮ್ಮದು. ಆದರೆ ಈ ಪುರಸ್ಕಾರಕ್ಕೆ ಅರ್ಹರಾಗಿರುವ ಇನ್ನೆಷ್ಟೋ ಮಂದಿ ಇದ್ದಾರೆ. ಎಲೆಮರೆಯ ಕಾಯಿಯ ಹಾಗಿರುವ ಸಾಧಕರ, ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರ ಹೆಸರು ಕಳುಹಿಸಿಕೊಡಿ. ಅವರನ್ನು ಗೌರವಿಸುತ್ತೇವೆ ಎಂದು ಮನವಿ ಮಾಡಿಕೊಂಡರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಧರ್ಮಸ್ಥಳದ ರತ್ನಮ್ಮ ಹೆಗ್ಗಡ್ತಿ ಅವರು ಸಾಧಕರನ್ನು ಗುರುತಿಸಿ ಪುರಸ್ಕರಿಸುವ ಸರಕಾರದ ಕೆಲಸವನ್ನು ಶ್ಲಾಘಿಸಿದರು. ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 55 ಮಂದಿ ಗಣ್ಯರನ್ನು ಶಾಲುಹೊದೆಸಿ, ಚಿನ್ನದ ಪದಕವಿತ್ತು ಮುಖ್ಯಮಂತ್ರಿ ಕೃಷ್ಣ ಸನ್ಮಾನಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications