ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ- ಸುಪ್ರಿಂಕೋರ್ಟ್
ನವದೆಹಲಿ : ಸಾರ್ವಜನಿಕ ಆರೋಗ್ಯದ ದೃಷ್ಠಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ರೈಲು ಸೇರಿದಂತೆ ಸಾರ್ವಜನಿಕರು ಪ್ರಯಾಣಿಸುವ ವಾಹನಗಳಲ್ಲಿ ಧೂಮಪಾನವನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರಿಂ ಕೋರ್ಟ್ ಆದೇಶ ನೀಡಿದೆ.
ನ್ಯಾಯಮೂರ್ತಿ ಎಂ. ಬಿ. ಶಾ ಮತ್ತು ನ್ಯಾಯಮೂರ್ತಿ ಆರ್.ಪಿ. ಸೇಥಿ ಅವರಿದ್ದ ಜಂಟಿ ನ್ಯಾಯಪೀಠ, ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಮುರಲಿ ಡಿಯೋರಾ ಅವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ. ಅಲ್ಲದೆ ಕಾನೂನು ಮತ್ತು ಜಾಹೀರಾತು ನೀತಿ ಸಂಹಿತೆ ಉಲ್ಲಂಘಿಸುವ ಸಿಗರೇಟು ಕಂಪೆನಿಗಳ ವಿರುದ್ಧ ತೆಗೆದುಕೊಂಡಿರುವ ಕ್ರಮಗಳ ವರದಿ ಸಲ್ಲಿಸುವಂತೆ ದೆಹಲಿ, ಅಹ್ಮದಾಬಾದ್, ಮುಂಬಯಿ, ಚೆನ್ನೈ, ಕಲ್ಕತ್ತಾ ಮತ್ತು ಬೆಂಗಳೂರು ಪೊಲೀಸ್ ಕಮಿಷನರ್ಗಳಿಗೆ ಸೂಚಿಸಲಾಗಿದೆ.
ಆದೇಶದ ಪ್ರಕಾರ ಆರೋಗ್ಯ ಸಂಸ್ಥೆಗಳು, ಸಾರ್ವಜನಿಕ ಕಚೇರಿಗಳು, ಸಾರ್ವಜನಿಕರು ಪ್ರಯಾಣಿಸುವ ವಾಹನಗಳು, ಕೋರ್ಟ್ ಕಚೇರಿ, ವಿದ್ಯಾ ಸಂಸ್ಥೆಗಳು, ಲೈಬ್ರರಿಗಳು ಮತ್ತು ಆಡಿಟೋರಿಯಂಗಳಲ್ಲಿ ಧೂಮಪಾನ ನಿಷಿದ್ಧ. ದೆಹಲಿ ಗೋವಾ, ರಾಜಸ್ಥಾನದಲ್ಲಿ ಈ ಕಾನೂನು ಈಗಾಗಲೇ ಜಾರಿಯಲ್ಲಿದೆ.
(ಪಿಟಿಐ)
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications