ತಲ್ಲಂ ನಂಜುಂಡಶೆಟ್ಟಿ ಚಲನಚಿತ್ರ ವಾಣಿಜ್ಯ ಮಂಡಳಿ ಹೊಸ ಅಧ್ಯಕ್ಷ
ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಖ್ಯಾತ ಚಿತ್ರ ಪ್ರದರ್ಶಕ ಹಾಗೂ ಚಿತ್ರ ಮಂದಿರಗಳ ಮಾಲಿಕರಾದ ತಲ್ಲಂ ನಂಜುಂಡಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಂಡಳಿ ಮೂಲಗಳು ತಿಳಿಸಿವೆ.
ಅಧ್ಯಕ್ಷ ಸ್ಥಾನಕ್ಕೆ ತಲ್ಲಂ ಅವರೊಬ್ಬರೇ ಅರ್ಜಿ ಸಲ್ಲಿಸಿದ್ದು, ಅವರ ಆಯ್ಕೆ ಅವಿರೋಧವಾಗಿ ನಡೆದಿದೆ. ಆದರೆ, ವಾಣಿಜ್ಯ ಮಂಡಳಿ ಈ ಬಗ್ಗೆ ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ನವೆಂಬರ್ ಮೂರರಂದು ಶನಿವಾರ ಮಂಡಳಿಗೆ ಈ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ.
ಪದಾಧಿಕಾರಿಗಳ ಆಯ್ಕೆಯಲ್ಲೂ ಶೇಕಡಾ 50ರಷ್ಟು ಅವಿರೋಧವಾಗಿ ನಡೆಯಲಿದೆ ಎಂದು ಮೂಲಗಳು ಹೇಳಿವೆ. ನಿರ್ಮಾಪಕರ ಕ್ಷೇತ್ರದಿಂದ ಎಸ್.ಎ. ಚಿನ್ನೇಗೌಡ, ಚಿತ್ರನಟಿ ಜಯಮಾಲಾ, ಹಂಚಿಕೆದಾರರ ವಲಯದಿಂದ ಬಿ.ಎಸ್. ನಾಗರಾಜ್, ಪ್ರದರ್ಶಕರ ವಲಯದಿಂದ ಥಾಮಸ್ ಡಿಸೋಜಾ ಹಾಗೂ ಕೆ.ವಿ. ಚಂದ್ರಶೇಖರ್ ಅವರುಗಳು ವಿವಿಧ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆಯಾಗುವ ಸಂಭವ ಇದೆ.
ಹಂಚಿಕೆದಾರರ ವಲಯದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಕ್ಕೆ ತೀವ್ರ ಪೈಪೋಟಿ ಇದ್ದು, ಚುನಾವಣೆ ನಡೆಯಲಿದೆ. ಈ ಮಧ್ಯೆ ಇಲ್ಲಿಯವರೆಗೆ ಮಂಡಳಿ ಅಧ್ಯಕ್ಷರಾಗಿದ್ದ ಕೆ.ಸಿ.ಎನ್. ಚಂದ್ರಶೇಖರ್ ಅವರು, ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ ಎಂದು ಇದೇ ಮೂಲಗಳು ಹೇಳಿವೆ. ಸರದಿಯ ಪ್ರಕಾರ ಈ ವರ್ಷ ಆ ಸ್ಥಾನ ಕರ್ನಾಟಕಕ್ಕೆ ಮೀಸಲಾಗಿದೆ.
(ಇನ್ಫೋವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications