ಮಹರ್ಷಿ ವಾಲ್ಮೀಕಿ ಜಯಂತಿ ಉತ್ಸವ ಆತಿಥ್ಯಕ್ಕೆ ಬೆಳಗಾವಿ ಸಜ್ಜು
ಬೆಳಗಾವಿ : ನವಂಬರ್ 11 ರಂದು ನಗರದಲ್ಲಿ ಜರುಗುವ 4 ನೇ ಮಹರ್ಷಿ ವಾಲ್ಮೀಕಿ ಜಯಂತಿ ಉತ್ಸವಕ್ಕೆ ಸಿದ್ಧತೆಗಳು ಭರದಿಂದ ನಡೆದಿದ್ದು , ಸುಮಾರು 1 ಲಕ್ಷಕ್ಕೂ ಹೆಚ್ಚು ಜನರು ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ದಾವಣಗೆರೆ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠಾಧ್ಯಕ್ಷರಾದ ಪುಣ್ಯಾನಂದಪುರಿ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯುವ ಸಮ್ಮೇಳನವನ್ನು ಕೇಂದ್ರ ನಗರಾಭಿವೃದ್ಧಿ ಸಚಿವ ಅನಂತಕುಮಾರ್ ಉದ್ಘಾಟಿಸುವರು. ಬೆಳಗಾವಿ ಜಿಲ್ಲಾ ನಾಯಕ ಸಮಾಜದ ಪ್ರಧಾನ ಕಾರ್ಯದರ್ಶಿ ರಾಜಶೇಖರ ತಳವಾರ ಬುಧವಾರ ಸುದ್ದಿಗಾರರಿಗೆ ವಾಲ್ಮೀಕಿ ಜಯಂತಿ ಉತ್ಸವದ ವಿವರಗಳನ್ನು ನೀಡಿದರು.
ಜಾತ್ಯತೀತ ಜನತಾದಳದ ಅಧ್ಯಕ್ಷ ಎಸ್.ಸಿದ್ಧರಾಮಯ್ಯ ಉತ್ಸವದ ಸ್ಮರಣ ಗ್ರಂಥ ಏಕಲವ್ಯ ಬಿಡುಗಡೆ ಮಾಡುವರು. ಇದೇ ಸಂದರ್ಭದಲ್ಲಿ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ಅನಾವರಣಗೊಳಿಸುವರು.
ಸಂಸದರಾದ ಅಮರಸಿಂಹ ಪಾಟೀಲ, ಶಶಿಕುಮಾರ್, ಶಾಸಕರಾದ ಅಮರೇಶ ನಾಯಕ, ಎನ್.ವೈ.ಗೋಪಾಲಕೃಷ್ಣ, ರಾಜಾ ವೆಂಕಟಪ್ಪ ನಾಯಕ ಹಾಗೂ ಉಮೇಶ ಕತ್ತಿ ಉತ್ಸವದಲ್ಲಿ ಭಾಗವಹಿಸುವರು ಎಂದು ರಾಜಶೇಖರ ತಳವಾರ ತಿಳಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications