ನ.3 ರಿಂದ ಬೆಂಗಳೂರಿನಲ್ಲಿ ರಾಷ್ಟ್ರೀಯ ಜಲ ಸಮ್ಮೇಳನ
ಬೆಂಗಳೂರು : ಮೂರು ದಿನಗಳ ರಾಷ್ಟ್ರೀಯ ಜಲ ಸಮ್ಮೇಳನ, ಬೆಂಗಳೂರಿನಲ್ಲಿ ಶನಿವಾರದಿಂದ ಆರಂಭವಾಗಲಿದೆ. ಈ ಸಮ್ಮೇಳನದಲ್ಲಿ ಪ್ರವಾಹ, ಬರ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಲಾಗುವುದು. ಈ ವಿಷಯವನ್ನು ರಾಜ್ಯ ಜಲಸಂಪನ್ಮೂಲ ಸಚಿವ ಎಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದು 9ನೇ ರಾಷ್ಟ್ರೀಯ ಸಮ್ಮೇಳನವಾಗಿದ್ದು, ಇದರಲ್ಲಿ ಭಾರತದ ವಿವಿಧ ಭಾಗಗಳಿಂದ ಆಗಮಿಸುವ 300ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಲ್ಳುತ್ತಿದ್ದಾರೆ. ಸಮ್ಮೇಳನದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ 49 ಪ್ರಬಂಧಗಳನ್ನು ಮಂಡಿಸಲಾಗುವುದು ಎಂದು ಪಾಟೀಲ್ ಸಮ್ಮೇಳನದ ವಿವರಗಳನ್ನು ನೀಡಿದರು.
ಕರ್ನಾಟಕ ಸರಕಾರ ಹಾಗೂ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯ ಜಂಟಿಯಾಗಿ ಆಯೋಜಿಸಿರುವ ಈ ಸಮ್ಮೇಳನದಲ್ಲಿ ಜಲ ಸಂರಕ್ಷಣೆ, ನೀರು ವಲಯದಲ್ಲಿ ಮಹಿಳೆಯರ ಪಾತ್ರ, ಪ್ರವಾಹ, ಬರಗಾಲದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳು, ನದಿ ಕಣಿವೆಯಲ್ಲಿ ಜಲ ಹಂಚಿಕೆ ಮೊದಲಾದ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು.
ಬೃಹತ್ ಜಲಸಂಪನ್ಮೂಲ ಯೋಜನೆಗಳಿಂದ ನಿರ್ವಸತಿಗರಾದವರ ಸಮಸ್ಯೆಗಳು ಹಾಗೂ ನೀರು ಬಳಕೆದಾರರ ಸಂಘಗಳ ಬಗ್ಗೆ ಕೂಡ ಸಮಾಲೋಚನೆ ನಡೆಸಲಾಗುವುದು ಎಂದು ಪಾಟೀಲ್ ಹೇಳಿದರು. ಈ ಸಮ್ಮೇಳನವು ಹಾಲಿ ಇರುವ ಕಾರ್ಯಯೋಜನೆಗಳನ್ನು ಮತ್ತಷ್ಟು ಕ್ರಿಯಾಶೀಲಗೊಳಿಸಲು ನೆರವು ನೀಡಲಿದೆ ಎಂದು ಅವರು ಹೇಳಿದರು.
(ಪಿ.ಟಿ.ಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications