ಧ್ವನಿವರ್ಧಕದ ಅಬ್ಬರ ತಂದ ಜಗಳ : ಹರಿಹರ ಉದ್ವಿಗ್ನ
ದಾವಣಗೆರೆ : ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಪ್ರಾರ್ಥನಾ ಮಂದಿರದಲ್ಲಿ ಅಬ್ಬರದಿಂದ ಧ್ವನಿವರ್ಧಕ ಹಾಕಿದ ಘಟನೆಗೆ ಸಂಬಂಧಿಸಿದಂತೆ ಹರಿಹರದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ 7 ಜನರು ಗಾಯಗೊಂಡಿದ್ದಾರೆ. ಧ್ವನಿವರ್ಧಕದ ವಿಚಾರದಲ್ಲಿ ಗುರುವಾರ ಆರಂಭವಾದ ಸಣ್ಣ ಜಗಳ ಶುಕ್ರವಾರ ರಾತ್ರಿ ಗುಂಪು ಘರ್ಣಣೆಗೆ ತಿರುಗಿ, ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಧ್ವನಿವರ್ಧಕ ಹಾಕಿದ್ದಕ್ಕೆ ಅಡ್ಡಿಪಡಿಸಿದ ಕೆಲವು ದುಷ್ಕರ್ಮಿಗಳ ನಡೆವಳಿಕೆಯಿಂದ ಪಟ್ಟಣದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಸ್ಥಳೀಯ ಪೊಲೀಸರ ಕ್ಷಿಪ್ರ ಕ್ರಮದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತು ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಹರಿಹರದ ಆಸ್ಪತ್ರೆಗೆ ಸೇರಿಸಲಾಗಿದೆ. ಪರಿಸ್ಥಿತಿ ಪ್ರಕೋಪಕ್ಕೆ ಹೋಗದಂತೆ ತಡೆಯಲು ದಾವಣಗೆರೆಯಿಂದ ಹೆಚ್ಚುವರಿ ಪೊಲೀಸ್ ತುಕಡಿಯನ್ನು ಕಳುಹಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಅಗರ್ವಾಲ್, ಡಿವೈಎಸ್ಪಿ ಬಸವರಾಜಪ್ಪ ಹರಿಹರದಲ್ಲಿ ಮೊಕ್ಕಾಂ ಹೂಡಿದ್ದು, ಬಿಗಿ ಬಂದೋಬಸ್ತ್ಗೆ ಆದೇಶಿಸಿದ್ದಾರೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ.
(ಪಿ.ಟಿ.ಐ/ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications