ವಾಜಪೇಯಿ ಅಮೆರಿಕಾ ಭೇಟಿ,ಉಭಯ ದೇಶ ಸಂಬಂಧ ವೃದ್ಧಿಗೆ ಒತ್ತು
ನವದೆಹಲಿ : ಭಾರತ ಹಾಗೂ ಅಮೆರಿಕಾ ವಿಶ್ವದ ಎರಡು ಅತಿದೊಡ್ಡ ಪ್ರಜಾಪ್ರಭುತ್ವ ದೇಶಗಳಾಗಿದ್ದು , ತಮ್ಮ ಅಮೆರಿಕಾ ಭೇಟಿಯಿಂದ ಉಭಯ ರಾಷ್ಟ್ರಗಳ ನಡುವಣ ಸಂಬಂಧ ವೃದ್ಧಿಸಲಿದೆ ಎಂದು ಪ್ರಧಾನಿ ವಾಜಪೇಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 10 ದಿನಗಳ ರಷ್ಯಾ ಹಾಗೂ ಅಮೆರಿಕ ಯಾತ್ರೆ ಭಾನುವಾರ (ನ.04)ದಿಂದ ಆರಂಭವಾಗಿದ್ದು , ಭಾನುವಾರ ಮಾಸ್ಕೋಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಈ ವಿಷಯ ತಿಳಿಸಿದರು. ಭಯೋತ್ಪಾದಕತೆಯ ವಿರುದ್ಧ ಉಭಯ ರಾಷ್ಟ್ರಗಳು ಒಟ್ಟಿಗೆ ಹೋರಾಡುತ್ತವೆ ಎಂದು ಅವರು ಹೇಳಿದರು.
ಮಾಸ್ಕೋ ಘೋಷಣೆ ಸಂಭವ
ಆಪ್ಘನ್ ಹಾಗೂ ಅಮೆರಿಕ ಯುದ್ಧದ ಹಿನ್ನೆಲೆಯಲ್ಲಿ ವಾಜಪೇಯಿ ಅವರ ವಿದೇಶ ಯಾತ್ರೆ ವಿಶೇಷ ಮಹತ್ವ ಪಡೆದಿದೆ.
ರಷ್ಯಾದಲ್ಲಿ ನಾಲ್ಕು ದಿನ ಕಳೆಯುವ ವಾಜಪೇಯಿ, ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಆಪ್ಘನ್ ಬಿಕ್ಕಟ್ಟು ಕುರಿತು ಚರ್ಚಿಸುವರು. ಇದೇ ಸಂದರ್ಭದಲ್ಲಿ ಭಯೋತ್ಪಾದಕತೆಯನ್ನು ನಿಗ್ರಹಿಸುವ ಮಾಸ್ಕೋ ಘೋಷಣೆಗೆ ವಾಜಪೇಯಿ ಹಾಗೂ ಪುಟಿನ್ ಸಹಿ ಹಾಕುವರು.
ರಷ್ಯಾ ಭೇಟಿಯ ನಂತರ ನವಂಬರ್ 7 ರಂದು ವಾಜಪೇಯಿ ಅಮೆರಿಕಾಗೆ ತೆರಳುವರು. ಆಪ್ಘನ್ ಯುದ್ಧ ಹಾಗೂ ಯುದ್ಧಾನಂತರದ ಆಪ್ಘನ್ ಸರ್ಕಾರದ ಬಗೆಗೆ ಅಮೆರಿಕಾದ ಅಧ್ಯಕ್ಷ ಜಾರ್ಜ್ ಬುಷ್ ಅವರೊಂದಿಗೆ ವಾಜಪೇಯಿ ಚರ್ಚಿಸುವರು. ನವಂಬರ್ 10 ರಂದು ನ್ಯೂಯಾರ್ಕ್‌ನಲ್ಲಿ ನಡೆಯುವ ವಿಶ್ವಸಂಸ್ಥೆ ಸಾಮಾನ್ಯಸಭೆ ಅಧಿವೇಶನವನ್ನು ಉದ್ದೇಶಿಸಿ ವಾಜಪೇಯಿ ಮಾತನಾಡುವರು.
ವಿದೇಶಾಂಗ ಸಚಿವ ಜಸ್ವಂತ್‌ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ಭಾರತೀಯ ನಿಯೋಗ ಪ್ರಧಾನಿ ವಾಜಪೇಯಿ ಅವರೊಂದಿಗೆ ತೆರಳಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications