ಮಂಗಳೂರಿನ ಕಾರ್ಪೊರೇಶನ್ ಬ್ಯಾಂಕ್ಗೆ ಬೆಸ್ಟ್ ಬ್ಯಾಂಕ್ ಪ್ರಶಸ್ತಿ
ಮಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವುದಕ್ಕಾಗಿ ಕಾರ್ಪೊರೇಶನ್ ಬ್ಯಾಂಕ್ಗೆ ಬೆಸ್ಟ್ ಬ್ಯಾಂಕಿಂಗ್ ಪ್ರಶಸ್ತಿಯನ್ನು ರಿಸರ್ವ್ ಬ್ಯಾಂಕ್ ಪ್ರಾಯೋಜಿಸಿರುವ ಬ್ಯಾಂಕಿಂಗ್ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಅಧ್ಯಯನ ಸಂಸ್ಥೆ ನೀಡಿದೆ.
ಕಾರ್ಪೊರೇಷನ್ ಬ್ಯಾಂಕ್ನ ಮ್ಯಾನೇಜಿಂಗ್ ಡೈರೆಕ್ಟರ್ ಕೆ. ಚೆರಿಯನ್ ವರ್ಗೀಸ್ ಆರ್ಬಿಐನ ಉಪ ಗವರ್ನರ್ ವೇಪಾ ಕಾಮೇಶಂ ಅವರಿಂದ ಹೈದರಾಬಾದ್ನಲ್ಲಿ ಸ್ವೀಕರಿಸಿರುವುದಾಗಿ ಸೋಮವಾರ ಬ್ಯಾಂಕ್ನ ಪ್ರಕಟಣೆ ತಿಳಿಸಿದೆ.
ಪ್ರಥಮ ಬಾರಿಗೆ ಬೆಸ್ಟ್ ಬ್ಯಾಂಕ್ ಪ್ರಶಸ್ತಿಯನ್ನು ಈ ವರ್ಷ ಆರಂಭಿಸಿದ್ದು, ಉತ್ತಮ ಸೇವೆ ಸಲ್ಲಿಸುವ, ಗ್ರಾಹಕರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಬ್ಯಾಂಕ್ಗಳನ್ನು ಪ್ರೋತ್ಸಾಹಿಸಲು ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಕಟಣೆ ಹೇಳಿದೆ.
ಕಾರ್ಪೋರೇಶನ್ ಬ್ಯಾಂಕ್ಗೆ ಈ ಪ್ರಶಸ್ತಿ ಬಂದಿರುವುದರಿಂದ ಬ್ಯಾಂಕ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಅಲ್ಲದೆ ಬ್ಯಾಂಕ್ನ ನೈತಿಕ ಬಲವೂ ವರ್ಧಿಸಿದೆ. ಈಗಾಗಲೇ ಬ್ಯಾಂಕ್ನ 84 ಶಾಖೆಗಳಿಗೆ ಕಂಪ್ಯೂಟರ್ ಅಳವಡಿಸಲಾಗಿದೆ. ಇದರಿಂದಾಗಿ ಈ- ಮೇಯ್ಲ್ ವ್ಯವಹಾರಗಳಿಗೂ ಬ್ಯಾಂಕ್ ಸ್ಪಂದಿಸುವುದು ಸಾಧ್ಯವಾಗುತ್ತಿದೆ ಎಂದು ವರ್ಗೀಸ್ ಅಭಿಪ್ರಾಯಪಟ್ಟಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications