ಒತ್ತಾಯಕ್ಕೆ ಮಣಿದ ಸರ್ಕಾರ ; ಗ್ರಾಮೀಣ ಪ್ರದೇಶಕ್ಕೆ ಹೆಚ್ಚು ವಿದ್ಯುತ್
ಬೆಂಗಳೂರು: ಸಾರ್ವಜನಿಕರ ಒತ್ತಾಯಕ್ಕೆ ಮಣಿದಿರುವ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಹೇರಿದ್ದ 14 ಗಂಟೆಗಳ ಲೋಡ್ ಷೆಡ್ಡಿಂಗ್ ಜಾರಿ ಆದೇಶವನ್ನು ಮಾರ್ಪಡಿಸಲು ಮುಂದಾಗಿದ್ದು , ಕೃಷಿ ಪಂಪ್ಸೆಟ್ಗಳಿಗೆ ಸತತ 6 ಗಂಟೆಗಳ ಕಾಲ ವಿದ್ಯುತ್ ಪೂರೈಸಲು ಒಪ್ಪಿಕೊಂಡಿದೆ.
6 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ಸರಬರಾಜು ಹಾಗೂ ಸಂಜೆ 6 ರಿಂದ ಮುಂಜಾನೆ 6 ಗಂಟೆವರೆಗೆ ಸಿಂಗಲ್ ಫೇಸ್ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮಂಗಳವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡುತ್ತಿದ್ದ ಇಂಧನ ಖಾತೆ ರಾಜ್ಯ ಸಚಿವ ವೀರಕುಮಾರ್ ಪಾಟೀಲ್ ಹೇಳಿದರು.
ಸದ್ಯದಲ್ಲಿ ಯಾವುದೇ ವಿದ್ಯುತ್ ಕಡಿತ ಹೇರುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ . ನೆರೆಯ ತಮಿಳುನಾಡು, ಕೇರಳ ಹಾಗೂ ಮಹಾರಾಷ್ಟ್ರಗಳಿಂದ ವಿದ್ಯುತ್ ಪಡೆಯಲು ಪ್ರಯತ್ನಿಸಲಾಗುತ್ತಿದೆ. ಅಕ್ಟೋಬರ್ 18 ರಿಂದ ಚತ್ತೀಸ್ಗಢ್ನಿಂದ 100 ಮೆಗಾವ್ಯಾಟ್ ವಿದ್ಯುತ್ ಪಡೆಯಲಾಗುತ್ತಿದೆ ಎಂದು ವೀರಕುಮಾರ್ ಹೇಳಿದರು.
ವಿದ್ಯುತ್ ಪಡೆಯಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) 3800 ಕೋಟಿ ರುಪಾಯಿಗಳನ್ನು ಖರ್ಚು ಮಾಡಿದ್ದು , ಪ್ರಸಕ್ತ ವರ್ಷದಲ್ಲಿ ಇನ್ನೂ 1200 ಕೋಟಿ ರುಪಾಯಿ ಬೇಕಾಗಿದೆ ಎಂದು ಅಂದಾಜು ಮಾಡಲಾಗಿದೆ. ಕೆಪಿಟಿಸಿಎಲ್ ಬೆಂಬಲಿಸುವ ಉದ್ದೇಶದಿಂದ ವಿದ್ಯುತ್ ಖರೀದಿಸಲು 1200 ಕೋಟಿ ರುಪಾಯಿಗಳನ್ನು ಮುಂಗಡವಾಗಿ ನೀಡಲು ಸರ್ಕಾರ ಉದ್ದೇಶಿಸಿದೆ ಎಂದು ಸಚಿವರು ತಿಳಿಸಿದರು.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications