ಸುಪ್ರಿಂಕೋರ್ಟ್ ತೀರ್ಪು ಅನ್ವಯ 26 ಮುನ್ಸೀಫರು ಮನೆಗೆ
ಬೆಂಗಳೂರು : ಸುಪ್ರಿಂಕೋರ್ಟ್ ತೀರ್ಪಿನ ಅನ್ವಯ, ಗ್ರಾಮೀಣ ಕೃಪಾಂಕದ ಆಧಾರದ ಮೇಲೆ ನೇಮಕಗೊಂಡಿದ್ದ 26 ಮುನ್ಸೀಫ್(ನ್ಯಾಯಾಧೀಶರು) ರನ್ನು ಸೇವೆಯಿಂದ ರಾಜ್ಯ ಹೈಕೋರ್ಟ್ ಬಿಡುಗಡೆ ಮಾಡಿದೆ ಎಂದು ಕಾನೂನು ಸಚಿವ ಡಿ.ಬಿ.ಚಂದ್ರೇಗೌಡ ತಿಳಿಸಿದ್ದಾರೆ.
13 ಸಾವಿರ ಸರ್ಕಾರಿ ನೌಕರರ ಉದ್ಯೋಗಕ್ಕೆ ಮಾರಕವಾಗಿರುವ ಗ್ರಾಮೀಣ ಕೃಪಾಂಕವನ್ನು ರದ್ದು ಗೊಳಿಸಿರುವ ತೀರ್ಪನ್ನು ಮಾನವೀಯತೆ ಹಿನ್ನೆಲೆಯಲ್ಲಿ ಸಡಿಲಗೊಳಿಸುವಂತೆ ಸುಪ್ರಿಂಕೋರ್ಟ್ಗೆ ರಾಜ್ಯ ಸರ್ಕಾರ ಮನವಿ ಮಾಡಿಕೊಳ್ಳಲಿದೆ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರೇಗೌಡ ಹೇಳಿದರು.
ಸುಪ್ರಿಂಕೋರ್ಟ್ಗೆ ಸಲ್ಲಿಸಲಿರುವ ಮನವಿಯು ಸಿದ್ಧತಾ ಹಂತದಲ್ಲಿದ್ದು , ಆದಷ್ಟು ಶೀಘ್ರದಲ್ಲಿ ನ್ಯಾಯಾಲಯಕ್ಕೆ ಮನವಿಯನ್ನು ಸಲ್ಲಿಸಲಾಗುವುದು. ಸರ್ಕಾರಿ ನೌಕರರ ನೇಮಕಾತಿಯಲ್ಲಿ ಗ್ರಾಮೀಣ ಕೃಪಾಂಕವನ್ನು ನೀಡುವ ರಾಜ್ಯ ಸರ್ಕಾರದ ವಿರುದ್ಧ ಸುಪ್ರಿಂಕೋರ್ಟ್ ನೀಡಿರುವ ತೀರ್ಪಿಗೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ, ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಪುನಃ ವಿಮರ್ಶೆ ಮನವಿಯನ್ನು ಸುಪ್ರಿಂಕೋರ್ಟ್ಗೆ ಸಲ್ಲಿಸಲಿದೆ.
ಗ್ರಾಮೀಣ ಹಾಗೂ ನಗರ ಪ್ರದೇಶದ ಉದ್ಯೋಗಾಕಾಂಕ್ಷಿಗಳ ನಡುವಿನ ಅಂತರವನ್ನು ತುಂಬಲು 1991 ರಿಂದಲೂ ರಾಜ್ಯ ಸರ್ಕಾರ ಗ್ರಾಮೀಣ ಕೃಪಾಂಕ ನೀಡುತ್ತಿದೆ. ಪ್ರಸ್ತುತ ಸುಪ್ರಿಂಕೋರ್ಟ್ ತೀರ್ಪು ಜಾರಿಗೆ ಬಂದಲ್ಲಿ 10 ಸಾವಿರ ಶಿಕ್ಷಕರು ಸೇರಿದಂತೆ 13 ಸಾವಿರ ಸರ್ಕಾರಿ ನೌಕರರು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಚಂದ್ರೇಗೌಡ ತಿಳಿಸಿದರು.
(ಪಿಟಿಐ)
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications