ಜಯದೇವ ಹೃದ್ರೋಗ ಸಂಸ್ಥೆ ಗೆ ಹೊಸ ಕಟ್ಟಡ,ತಂತ್ರಜ್ಞಾನದ ರಂಗು
ಬೆಂಗಳೂರು: ರಾಜ್ಯ ಸರ್ಕಾರ ಸ್ವಾಮ್ಯದ ಜಯದೇವ ಹೃದ್ರೋಗ ಸಂಸ್ಥೆಯ ನೂತನ ಸುಸಜ್ಜಿತ ಕಟ್ಟಡ ಪೂರ್ಣಗೊಂಡಿದ್ದು , ಶೀಘ್ರದಲ್ಲೇ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ವೈದ್ಯಕೀಯ ಮತ್ತು ಉನ್ನತ ಶಿಕ್ಷಣ ಸಚಿವ ಡಾ।ಜಿ.ಪರಮೇಶ್ವರ್ ಗುರುವಾರ ತಿಳಿಸಿದರು.
44 ಕೋಟಿ ರುಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಈ ಕಟ್ಟಡ 25 ಕೋಟಿ ರುಪಾಯಿ ವೆಚ್ಚದಲ್ಲಿ ಆಧುನಿಕ ತಂತ್ರಜ್ಞಾನ ಸೌಲಭ್ಯಗಳನ್ನು ಅಳವಡಿಸಿಕೊಂಡಿದೆ. ಡಿಸೆಂಬರ್ ತಿಂಗಳಲ್ಲಿ ಈ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಮೇಶ್ವರ್ ತಿಳಿಸಿದರು.
519 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆಯು ಏಷ್ಯಾದಲ್ಲೇ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆಯಾಗಿದೆ ಹಾಗೂ ಸ್ವಿಂಗ್ ಲ್ಯಾಬ್ ಹೊಂದಿರುವ ಭಾರತದ ಏಕೈಕ ಆಸ್ಪತ್ರೆಯಾಗಿದೆ. ಆಧುನಿಕ ತಂತ್ರಜ್ಞಾನ ಅಳವಡಿಕೆಯಿಂದ ಮಾಮೂಲಿ ಸಮಯದಲ್ಲಿ ದುಪ್ಪಟ್ಟು ರೋಗಿಗಳನ್ನು ಪರೀಕ್ಷೆ ಮಾಡಬಹುದಾಗಿದೆ. ಬಡ ರೋಗಿಗಳಿಗೆ ಉಚಿತವಾಗಿ ವಾಲ್ವ್‌ಗಳನ್ನು ಒದಗಿಸಲಿಕ್ಕಾಗಿ ಸಂಸ್ಥೆಯು ಟಿಷ್ಯೂ ವಾಲ್ವ್ ಬ್ಯಾಂಕ್ ಸ್ಥಾಪಿಸಲು ಉದ್ದೇಶಿಸಿದೆ ಎಂದು ಪರಮೇಶ್ವರ್ ಹೇಳಿದರು.
ಜಯದೇವ ಹೃದ್ರೋಗ ಸಂಸ್ಥೆಯ ಮುಂದೆ ಗುರಿಗಳು ನೂರು
ಬೆಂಗಳೂರು ಸುತ್ತ ಮುತ್ತಲಿನ ಜಿಲ್ಲೆಗಳಲ್ಲಿ ಪ್ರತಿ ವರ್ಷ 3 ಸಾವಿರ ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಸಂಸ್ಥೆಯ ನಿರ್ದೇಶಕ ಡಾ। ಎ.ಎನ್.ಪ್ರಭುದೇವ್ ಹೇಳಿದರು.
ಪ್ರಸ್ತುತ 1 ಸಾವಿರ ವಾಲ್ವ್‌ಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು , ಇದರ ಪ್ರಯೋಜನವನ್ನು ಅನೇಕ ಹೃದ್ರೋಗಿಗಳು ಪಡೆಯಲಿದ್ದಾರೆ. ಬಡ ರೋಗಿಗಳಿಗೆ ಉಚಿತವಾಗಿ ವಾಲ್ವ್ ವಿತರಿಸಲಾಗುವುದು. ಹೈಪರ್ ಟೆನ್ಷನ್, ಡಯಾಬಿಟಿಸ್, ರಿಹ್ಯಾಬಿಲಿಟೇಶನ್ ಕಾರ್ಡಿಯಾಲಜಿ ವಿಭಾಗಗಳನ್ನು ಸ್ಥಾಪಿಸಲು ಸಂಸ್ಥೆ ಉದ್ದೇಶಿಸಿದೆ ಎಂದು ಪ್ರಭುದೇವ್ ಹೇಳಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications