ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಂದಾಪುರ, ಕಾರ್ಕಳ, ಸುಳ್ಯ, ಪುತ್ತೂರಿನಲ್ಲೂ ಮತದಾನ ಆರಂಭ

By Staff
|
Google Oneindia Kannada News

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಒಟ್ಟು 10 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದ್ದು, ಬಿಗಿ ಭದ್ರತೆಯಲ್ಲಿ ಭಾನುವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದೆ.

ಬೆಂಗಳೂರು ಮಹಾನಗರ ಪಾಲಿಕೆಯ 100 ವಾರ್ಡ್‌ಗಳು, ಉಡುಪಿ ಜಿಲ್ಲೆಯ ಕುಂದಾಪುರ, ಕಾರ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡಬಿದರೆ ಪುರಸಭೆಗಳ 96 ವಾರ್ಡ್‌ಗಳಲ್ಲಿ ಮತದಾನ ಆರಂಭವಾಗಿದೆ.

ಇದಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣ ಪಂಚಾಯ್ತಿಗಳ 80 ವಾರ್ಡ್‌ಗಳಿಗೂ ಭಾನುವಾರ ಬಿರುಸಿನಿಂದ ಮತದಾನ ಆರಂಭವಾಗಿದೆ. 4 ಪುರಸಭೆ ಹಾಗೂ 5 ಪಟ್ಟಣ ಪಂಚಾಯ್ತಿಗಳ ಚುನಾವಣೆಗಾಗಿ ಒಟ್ಟು 204 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 92 ಮತಗಟ್ಟೆಗಳನ್ನು ಸೂಕ್ಷ್ಮ ಹಾಗೂ 42 ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X