‘ರಾಜ್ಯದಲ್ಲಿ ಯದ್ವಾ ತದ್ವಾ ಅಡಿಕೆ ಬೆಳೆಯುವುದನ್ನು ನಿಯಂತ್ರಿಸಬೇಕು’
ಶಿವಮೊಗ್ಗ : ರಾಜ್ಯದಲ್ಲಿ ಮಿತಿ ಮೀರಿ ಅಡಿಕೆ ಬೆಳೆಯುವುದರ ವಿರುದ್ಧ ಸೂಕ್ತ ಕಡಿವಾಣ ಹಾಕಬೇಕಾಗಿದೆ ಎಂದು ರಾಜ್ಯ ಕೃಷಿ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.
ಪ್ರಸ್ತುತ ಅಡಿಕೆ ಮಾರುಕಟ್ಟೆ ತೀರಾ ಕುಸಿದಿರುವುದರಿಂದ ನಿರ್ದಿಷ್ಟ ಮಿತಿಗಿಂತ ಹೆಚ್ಚು ಅಡಿಕೆ ಬೆಳೆಯುವುದನ್ನು ನಿಯಂತ್ರಿಸಬೇಕು. ಇದರಿಂದ ಅಡಿಕೆಗೆ ಉತ್ತಮ ಮಾರುಕಟ್ಟೆ ಕಲ್ಪಿಸುವುದು ಸಾಧ್ಯವಾಗಬಹುದು ಎಂದು ಸಚಿವರು ಅಭಿಪ್ರಾಯಪಟ್ಟರು. ಅವರು ಭಾನುವಾರ ಜಿಲ್ಲೆಯ ನವಿಲೆ ಮಹಾವಿದ್ಯಾಲಯದಲ್ಲಿ , ಅಡಿಕೆ ಬೆಳೆಗಾರರ ದಶಕಗಳ ಬೇಡಿಕೆಯಾಗಿದ್ದ ಅಡಿಕೆ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಭತ್ತ , ರಾಗಿ , ಶೇಂಗಾ ಮತ್ತಿತರ ಬೆಳೆಗಳನ್ನು ಬೆಳೆಯುತ್ತಿದ್ದ ರೈತರಿಗೆ ಪ್ರತಿ ವರ್ಷ ಸರಿಯಾದ ಬೆಳೆ ಸಿಗುತ್ತಿರಲಿಲ್ಲ. ಇದರಿಂದ ಅವರು ಲಾಭದಾಯಕವಾಗಿದ್ದ ಅಡಿಕೆ ಬೆಳೆ ಬೆಳೆಯಲು ಆರಂಭಿಸಿದರು. ಈಗ ಅಡಿಕೆಗೂ ಬೆಲೆ ಇಲ್ಲದಂತಾಗಿದೆ ಎಂದ ಜಯಚಂದ್ರ, ಪರ್ಯಾಯ ಬೆಳೆಗಳ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆಯಬೇಕು ಎಂದರು.
ಕೃಷಿ ಸಂಶೋಧನಾ ಕೇಂದ್ರಗಳು ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಸಂಶೋಧನೆ ನಡೆಸಬೇಕಾಗಿದ್ದು, ಒಣ ಭೂಮಿಯಲ್ಲಿ ಬೆಳೆಯಬಲ್ಲ ಹಾಗೂ ರೋಗ ನಿರೋಧಕ ತಳಿಗಳ ಸಂಶೋಧನೆಯಾಗಬೇಕು. ಅಡಿಕೆ ಸಂಶೋಧನಾ ಕೇಂದ್ರಕ್ಕೆ ನೀಡಲು ಉದ್ದೇಶಿಸಿರುವ 72 ಲಕ್ಷ ರೂಪಾಯಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications