ಗಾಯತ್ರಿನಗರ, ಅರಮನೆ ನಗರದಲ್ಲಿ ಮರುಮತದಾನ ಆರಂಭ
ಬೆಂಗಳೂರು : ಕಣದಲ್ಲಿರುವ ಅಭ್ಯರ್ಥಿಗಳ ಕ್ರಮಸಂಖ್ಯೆ ತಪ್ಪಾಗಿ ಮುದ್ರಣವಾಗಿದ್ದ ಹಿನ್ನೆಲೆಯಲ್ಲಿ ಗಾಯತ್ರಿನಗರ ವಾರ್ಡ್ನ ಎಲ್ಲಾ ಹಾಗೂ ಮತಪೆಟ್ಟಿಗೆ ಅಪಹರಣ ನಡೆದಿದ್ದ ಅರಮನೆ ನಗರದ ಕೆಲವು ಮತಗಟ್ಟೆಗಳಲ್ಲಿ ಗುರುವಾರ ಮತದಾನ ಆರಂಭವಾಗಿದೆ.
ನವೆಂಬರ್ 11ರಂದು ನಡೆದ ಚುನಾವಣೆಯಲ್ಲಿ ಮತಗಟ್ಟೆ ಅಪಹರಣ ನಡೆದಿದ್ದ ಅರಮನೆ ನಗರದ ವಾರ್ಡ್ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಗೋಪಾಲ್ ಹೊಸೂರ್ ತಿಳಿಸಿದ್ದಾರೆ. ಈಹೊತ್ತು ಈ ಎರಡೂ ವಾರ್ಡ್ಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ.
ಈ ಎರಡು ವಾರ್ಡ್ಗಳ ಮತ ಎಣಿಕೆ ಕಾರ್ಯ ಗುರುವಾರ ಸಂಜೆ 6 ಗಂಟೆಗೆ ಆರಂಭವಾಗಲಿದ್ದು, ರಾತ್ರಿಯ ವೇಳೆಗೆ ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣೆ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೆರಡು ಸ್ಥಾನ ಕಾಂಗ್ರೆಸ್ಗೆ: ಇದಕ್ಕೂ ಮುನ್ನ ನವೆಂಬರ್ 13ರಂದು ಮಹಾನಗರ ಪಾಲಿಕೆಯ 4 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆರಡು ಸ್ಥಾನಗಳನ್ನು ಗೆದ್ದುಕೊಂಡಿದೆ. ಉಳಿದೆರಡು ಸ್ಥಾನಗಳು ಜಾತ್ಯತೀತ ಜನತಾದಳ ಹಾಗೂ ಪಕ್ಷೇತರರ ಪಾಲಾಗಿದೆ. ಈ ವಿಜಯದೊಂದಿಗೆ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಬಲ 56ಕ್ಕೇರಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications