ಕುಡಿಯುವ ನೀರು ಪೂರೈಕೆ ಖಾಸಗಿಯ ಕೈಗೆ : ಸರ್ಕಾರದ ನಿರ್ಧಾರ
ಬೆಂಗಳೂರು : ರಾಜ್ಯದ ನಗರವೊಂದರ (ಬೆಂಗಳೂರು ನಗರವನ್ನು ಹೊರತುಪಡಿಸಿ) ಕುಡಿಯುವ ನೀರು ಪೂರೈಕೆ ಮತ್ತು ಒಳಚರಂಡಿ ವ್ಯವಸ್ಥೆಯ ನಿರ್ವಹಣೆಯನ್ನು ಪ್ರಾಯೋಗಿಕವಾಗಿ ಖಾಸಗಿಯವರಿಗೆ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ. ಈ ವಿಷಯವನ್ನು ರಾಜ್ಯ ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಗುರುವಾರ ತಿಳಿಸಿದ್ದಾರೆ.
ಕುಡಿಯುವ ನೀರು ಪೂರೈಕೆ, ಒಳ ಚರಂಡಿ ಸೇರಿದಂತೆ ನಾಗರಿಕ ಸೌಲಭ್ಯಗಳ ನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲು ಸರಕಾರ ಈಗಾಗಲೇ ನಿರ್ಧರಿಸಿದೆ ಎಂದು ಅವರು ಹೇಳಿದರು. ಯಾವ ನಗರದ ನೀರು ಪೂರೈಕೆ ಮತ್ತು ಒಳಚರಂಡಿ ವ್ಯವಸ್ಥೆ ನಿರ್ವಹಣೆಯನ್ನು ಖಾಸಗಿ ಸಂಸ್ಥಗೆ ಒಪ್ಪಿಸಲಾಗಿದೆ ಎಂಬ ಬಗ್ಗೆ ಇನ್ನೊಂದು ವಾರದಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ ಎಂದೂ ಸಚಿವರು ತಿಳಿಸಿದರು.
ಅಕ್ರಮ ಸಂಪರ್ಕ: ಅಂದಾಜಿನ ಪ್ರಕಾರ ನಗರ ಪ್ರದೇಶಗಳಲ್ಲಿರುವ ನೀರು ಮತ್ತು ಒಳಚರಂಡಿ ಸಂಪರ್ಕಗಳ ಪೈಕಿ ಶೇ.60ರಷ್ಟು ಅಕ್ರಮ ಸಂಪರ್ಕಗಳಾಗಿವೆ. ಈ ವ್ಯವಸ್ಥೆಯನ್ನು ಖಾಸಗಿಕರಣಗೊಳಿಸಿದರೆ, ಅವರು, ಅಕ್ರಮ ಸಂಪರ್ಕ ಪತ್ತೆಹಚ್ಚಿ, ಶುಲ್ಕ ವಸೂಲಿ ಮಾಡುತ್ತಾರೆ. ಇದರಿಂದಾಗಿ ಅಕ್ರಮ ಸಂಪರ್ಕಗಳನ್ನು ತಡೆಯಬಹುದಾಗಿದೆ ಎಂದೂ ಸಚಿವರು ವಿವರಿಸಿದರು.
ರಾಜ್ಯದಲ್ಲಿ ನಿಷ್ಕಿೃಯವಾಗಿದ್ದ 15 ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ನೋಟಿಸ್ ನೀಡಿ, ವಿಸರ್ಜನೆ ಮಾಡುವ ಸೂಚನೆಯನ್ನೂ ನೀಡಲಾಗಿತ್ತು ಈಗ ಅವು ಮತ್ತೆ ಕಾರ್ಯಪ್ರವೃತ್ತವಾಗಿವೆ ಎಂದ ಸಚಿವರು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 60 ಎಂಜಿನಿಯರ್ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications