ಸಾಹಿತಿ, ರಾಜಕಾರಣಿ, ಪತ್ರಕರ್ತ ಮಹದೇವ ಬಣಕಾರ್ ನಿಧನ
ಬೆಂಗಳೂರು : ಮಾಜಿ ಶಾಸಕ, ಜಾನಪದ ಸಾಹಿತಿ, ನಾಟಕಕಾರ ಮಹದೇವ ಬಣಕಾರ್ ಅವರು ಶನಿವಾರ ಮಧ್ಯಾಹ್ನ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಬಣಕಾರ್ ಅವರಿಗೆ ಪತ್ನಿ, ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ.
ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ರಾತ್ರಿ ದಾವಣಗೆರೆಯಿಂದ ಕರೆತಂದು ಬೆಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಅವರು ಆಸ್ಪತ್ರೆಯಲ್ಲಿ ನಿಧನರಾದರು. ಭಾನುವಾರ ಮಧ್ಯಾಹ್ನ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕು ಮೊಟೆ ಬೆನ್ನೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
ಸಾಹಿತ್ಯದ ಜೊತೆಗೆ ರಾಜಕೀಯ ರಂಗದಲ್ಲೂ ಗಣನೀಯ ಸೇವೆ ಸಲ್ಲಿಸಿದ್ದ ಬಣಕಾರ್ 1967ರಲ್ಲಿ ಬ್ಯಾಡಗಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ರಾಮಕೃಷ್ಣ ಹೆಗಡೆ ಅವರ ಆಡಳಿತಾವಧಿಯಲ್ಲಿ ವಿಧಾನಪರಿಷತ್ ಸದಸ್ಯರೂ ಆಗಿದ್ದರು. ಕಥೆ, ಕಾವ್ಯ, ನಾಟಕ, ವಚನ ಹೀಗೆ ನಾನಾ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ನಡೆಸಿದ್ದ ಅವರು, ಬಣಕಾರರ ವಚನಗಳು ಎಂಬ 1108 ವಚನಗಳ ಬೃಹತ್ ಗ್ರಂಥವನ್ನೂ ರಚಿಸಿದ್ದರು.
ಭಾಮಿನಿ ಷಟ್ಪದಿಯಲ್ಲಿ ಮರಳು ಸಿದ್ದಯ್ಯನ ಜೀವನ ಚರಿತ್ರೆ, ವಚನದೀಪ್ತಿ, ಕಾವ್ಯೋದಯ, ಬಣ್ಣದ ಕಾರಂಜಿ, ಅಪರಂಜಿ ಮುಂತಾದ 80ಕ್ಕೂ ಹೆಚ್ಚು ಕೃತಿಗಳನ್ನು ಬಣಕಾರ್ ರಚಿಸಿದ್ದರು. ಪತ್ರಕರ್ತರಾಗಿಯೂ ಕೆಲಕಾಲ ಸೇವೆ ಸಲ್ಲಿಸಿದ್ದ ಅವರು, ಹಲವು ಪತ್ರಿಕೆಗಳಿಗೆ ಅಂಕಣಕಾರರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತಾಪ: ಹಿರಿಯ ಲೇಖಕ, ರಾಜಕಾರಣಿ ಮಹದೇವ ಬಣಕಾರ್ ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ , ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಸಚಿವರಾದ ಡಿ.ಬಿ. ಚಂದ್ರೇಗೌಡ, ಆರ್.ವಿ. ದೇಶಪಾಂಡೆ ಮೊದಲಾದವರು ಸಂತಾಪ ಸೂಚಿಸಿದ್ದಾರೆ.
(ಇನ್‌ಫೋ ವಾರ್ತೆ)ಮುಖಪುಟ / ಇವತ್ತು... ಈ ಹೊತ್ತು...
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications