ಮಳೆ : 56 ತಾಲ್ಲೂಕಿನಲ್ಲಿ ಹೆಚ್ಚು, 58 ತಾಲ್ಲೂಕುಗಳಲ್ಲಿ ಕೊರತೆ
ಬೆಂಗಳೂರು: ರಾಜ್ಯದ 175 ತಾಲ್ಲೂಕುಗಳ ಪೈಕಿ 58 ತಾಲ್ಲೂಕುಗಳು ತೀವ್ರ ಮಳೆಯ ಕೊರತೆ ಎದುರಿಸುತ್ತಿವೆ ಎಂದು ಬರ ಪರಿಹಾರ ಉಸ್ತುವಾರಿ ಕೋಶದ ಪ್ರಕಟಣೆ ತಿಳಿಸಿದೆ.
ಕಳೆದ 10 ದಿನಗಳಲ್ಲಿ - ರಾಜ್ಯದ 58 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿಯಿದ್ದರೆ, 56 ತಾಲ್ಲೂಕುಗಳಲ್ಲಿ ಅಧಿಕ ಮಳೆ, 44 ತಾಲ್ಲೂಕುಗಳಲ್ಲಿ ಮಾಮೂಲು ಮಳೆ ಹಾಗೂ 12 ತಾಲ್ಲೂಕುಗಳಲ್ಲಿ ಸಾಧಾರಣ ಮಳೆಯಾಗಿದೆ.
ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಬೆಳಗಾವಿ, ಹಾವೇರಿ, ಧಾರವಾಡ, ಶಿವಮೊಗ್ಗ , ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳು ಮಳೆಯ ಅಭಾವ ಎದುರಿಸುತ್ತಿರುವ ಜಿಲ್ಲೆಗಳಾಗಿವೆ. ಅಧಿಕ ಮಳೆಯಾಗಿರುವ ಯಾದಿಗೆ ಕೋಲಾರ, ಮೈಸೂರು, ಬಳ್ಳಾರಿ, ಗುಲ್ಬರ್ಗಾ, ಬೀದರ್, ಬಾಗಲಕೋಟೆ ಹಾಗೂ ಬಿಜಾಪುರ ಜಿಲ್ಲೆಗಳು ಸೇರಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಉಡುಪಿ, ಗದಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications