ತುಮಕೂರು ಬಳಿ ರಸ್ತೆ ಅಪಘಾತ: ಒಂದೇ ಕುಟುಂಬದ ಐವರ ಸಾವು
ಬೆಂಗಳೂರು : ದಾಬಾಸ್ಪೇಟೆ ಬಳಿ ಬೆಂಗಳೂರು - ಪೂನಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಎರಡು ಮಕ್ಕಳು ತೀವ್ರವಾಗಿ ಗಾಯಗೊಂಡಿವೆ. ಗಾಯಗೊಂಡಿರುವ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.
ಮಂಗಳವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಶಿವಗಂಗೆ ವೃತ್ತದಲ್ಲಿ ಲಾರಿ ಹಾಗೂ ವ್ಯಾನ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೆಂಗಳೂರಿನ ಶಿವಾಜಿನಗರದ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾವನ್ನಪ್ಪಿದವರನ್ನು ಶಿವಾಜಿನಗರದ ನೂರ್ ಅಹ್ಮದ್ (50 -ಚಾಲಕ), ನಿಜಾವುಲ್ಲಾ ಷರಿಫ್ (55), ಶಂಶದ್ ಬೇಗಂ (48), ಸಬೀರ್ ಬೇಗಂ (48), ಸಬೀರ್ ಬೇಗಂ (30) ಹಾಗೂ ಶಾಜೂದಾ ಬೇಗಂ (38) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ಹಾಗೂ ಗಾಯಗೊಂಡ ಎಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರೆಂದು ಪೊಲೀಸರು ತಿಳಿಸಿದ್ದಾರೆ. ಈ ಕುಟುಂಬದವರು, ಬೆಂಗಳೂರಿನ ಮನೆ ಖಾಲಿ ಮಾಡಿ, ತುಮಕೂರಿನಲ್ಲಿ ನೆಲೆಸುವ ಉದ್ದೇಶದಿಂದ ವ್ಯಾನ್ನಲ್ಲಿ ಪ್ರಯಾಣಿಸುತ್ತಿದ್ದರು. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
(ಪಿ.ಟಿ.ಐ/ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications