ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಫ್ಟ್‌ವೇರ್‌ ತಂತ್ರಜ್ಞರಿಗೆ ಮತ್ತೆ ಒಳ್ಳೆಕಾಲ ಬರತ್ತೆ : ಕೃಷ್ಣ ವಿಶ್ವಾಸ

By Staff
|
Google Oneindia Kannada News

ತುಮಕೂರು: ತಾಂತ್ರಿಕ ಕಾಲೇಜುಗಳನ್ನು ತೆರೆಯುವ ವಿಷಯದಲ್ಲಿ ರಾಜ್ಯ ಸರಕಾರ ಉದಾರ ನೀತಿ ಅನುಸರಿಸುತ್ತಿದೆ. ಅಗತ್ಯ ಮೂಲಭೂತ ಸೌಲಭ್ಯಗಳೊಂದಿಗೆ ಯಾವುದೇ ಶಿಕ್ಷಣ ಸಂಸ್ಥೆ ತಾಂತ್ರಿಕ ಕಾಲೇಜು ತೆರೆಯಲು ಮುಂದೆ ಬಂದರೆ, ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಕೃಷ್ಣ ತಿಳಿಸಿದ್ದಾರೆ.

ಇಲ್ಲಿಗೆ ಸಮೀಪದ ಗುಬ್ಬಿಯಲ್ಲಿ ಚೆನ್ನ ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಸಿಐಟಿ ಕ್ಯಾಂಪಸ್‌ ಕಟ್ಟಡ ಉದ್ಘಾಟಿಸಿ ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು, ತಾಂತ್ರಿಕ ಕಾಲೇಜು ತೆರೆಯಲು ಬೇಡಿಕೆಯೇನೋ ಇದೆ. ಅವರು ಮೂಲಭೂತ ಸೌಕರ್ಯಗಳೊಂದಿಗೆ ಬಂದರೆ ಮಾತ್ರ ಅನುಮತಿ ನೀಡಲು ಸರಕಾರ ಸಿದ್ಧ ಎಂದರು.

ಬೇಡಿಕೆ ಬರತ್ತೆ : ರಾಜ್ಯದ ಎಲ್ಲ ಭಾಗದಲ್ಲಿಯೂ ಸುಸಜ್ಜಿತ ತಾಂತ್ರಿಕ ಕಾಲೇಜುಗಳಿರಬೇಕು ಎಂದು ರಾಜ್ಯ ಸರಕಾರ ಬಯಸುತ್ತದೆ. ಈ ನಿಟ್ಟಿನಲ್ಲಿ ಸರಕಾರದ ನೀತಿ ಅಛಲವಾಗಿದೆ ಎಂದರು. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಹಿನ್ನಡೆ ಹಾಗೂ ಅಮೆರಿಕ ಮೇಲೆ ನಡೆದ ವಿಧ್ವಂಸಕ ದಾಳಿಯ ಹಿನ್ನೆಲೆಯಲ್ಲಿ ಪ್ರಸ್ತುತ ಸಾಫ್ಟ್‌ವೇರ್‌ ಹಾಗೂ ಐ.ಟಿ. ತಂತ್ರಜ್ಞರಿಗೆ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ವರ್ಷಗಳಲ್ಲಿ ಅವರಿಗೆ ಮತ್ತೆ ಬೇಡಿಕೆ ಬಂದೇ ಬರುತ್ತದೆ ಎಂದು ಕೃಷ್ಣ ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಶಿವಕುಮಾರ ಸ್ವಾಮಿಜೀ, ಆದಿಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ, ವಿವೇಕಾನಂದಾಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ, ತಮ್ಮಡಿ ಹಳ್ಳಿ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಬೆಟ್ಟದ ಹಳ್ಳಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶೀರ್ವಚನ ನೀಡಿದರು.

ಸಂಸತ್‌ ಸದಸ್ಯ ಜಿ.ಎಸ್‌. ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರುಗಳಾದ ಟಿ.ಬಿ. ಜಯಚಂದ್ರ, ಡಾ. ಜಿ. ಪರಮೇಶ್ವರ್‌, ಕಾಗೋಡು ತಿಮ್ಮಪ್ಪ, ರಾಣಿ ಸತೀಶ್‌ ಮೊದಲಾದವರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಗುಬ್ಬಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಮುಖಪುಟ / ಕೃಷ್ಣಗಾರುಡಿಯ ಕನ್ನಡಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X