ನ.26 ರಂದು ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷಾ ಫಲಿತಾಂಶ
ಬೆಂಗಳೂರು: 15, 500 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗಾಗಿ ಸಿಇಟಿ ಮಾದರಿಯಲ್ಲಿ ಇತ್ತೀಚೆಗೆ ನಡೆದ ಪರೀಕ್ಷೆಯ ಫಲಿತಾಂಶ ನವಂಬರ್ 26 ರ ಸೋಮವಾರ ಪ್ರಕಟವಾಗಲಿದೆ.
ನೇಮಕಾತಿಯಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಇದೇ ಮೊದಲ ಬಾರಿಗೆ ಶಿಕ್ಷಕರ ನೇಮಕಾತಿಗೆ ಸರ್ಕಾರ ಪರೀಕ್ಷೆ ನಡೆಸಿದ್ದು , ಈ ಪರೀಕ್ಷೆಯ ಫಲಿತಾಂಶದ ಮೇಲೆ ಶಿಕ್ಷಕರ ನೇಮಕಾತಿ ನಡೆಯುವುದೆಂದು ಬುಧವಾರ ಸುದ್ದಿಗಾರರಿಗೆ ಪ್ರಾಥಮಿಕ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ತಿಳಿಸಿದರು.
ಪರೀಕ್ಷಾ ಕಾರ್ಯದಲ್ಲಿ ಕರ್ತವ್ಯ ಚ್ಯುತಿ ಆರೋಪದ ಮೇರೆಗೆ ಚಿಕ್ಕೋಡಿಯ ಡಿಡಿಪಿಐ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ರಿಜಿಸ್ಟರ್ ನಂಬರ್ ಹಾಗೂ ಪರೀಕ್ಷೆ ಬರೆಯುವ ಸ್ಥಳವನ್ನು ತಿಳಿಯಲು ಸಾಧ್ಯವಾಗದೆ ಪರೀಕ್ಷೆ ಬರೆಯಲು ಸಾಧ್ಯವಾಗದ ಒಬ್ಬ ಪರೀಕ್ಷಾಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸರ್ಕಾರದ ನೂತನ ಶಿಕ್ಷಣ ನೀತಿಯನ್ನು ಗೇಲಿ ಮಾಡಿದ ರಾಯಚೂರಿನ ಶಿಕ್ಷಣ ಅಧಿಕಾರಿಯಾಬ್ಬರನ್ನು ಕೂಡ ಅಮಾನತುಗೊಳಿಸಲಾಗಿದೆ ಎಂದು ಸಚಿವರು ಹೇಳಿದರು.
ಹೈಸ್ಕೂಲ್ ಶಿಕ್ಷಕರ ನೇಮಕಾತಿಗೂ ಇದೇ ಮಾದರಿಯ ಪರೀಕ್ಷೆ ನಡೆಸಲು ಸರ್ಕಾರ ನಿಶ್ಚಯಿಸಿದೆ. ವಿಜ್ಞಾನ ವಿಷಯಗಳಲ್ಲಿ 60 ಟಿಸಿಎಚ್ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಲು ನಿರ್ಧರಿಸಿದೆ ಎಂದು ವಿಶ್ವನಾಥ್ ಹೇಳಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications