Get Updates
Get notified of breaking news, exclusive insights, and must-see stories!

ಬಿಜಾಪುರ ಬಳಿ ಲಾರಿ-ಟೆಂಪೋ ಡಿಕ್ಕಿ , ಮೂರು ಮಂದಿ ಸಾವು

ಬೆಂಗಳೂರು: ಬಿಜಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 13ರ ಹುನ್ನೆಬಾವಿ ಬಳಿ ಬುಧವಾರ ರಾತ್ರಿ ಲಾರಿ ಹಾಗೂ ಟೆಂಪೋ ನಡುವೆ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೂವರು ಮೃತರಾಗಿದ್ದು , ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಬಾಗೇವಾಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರನ್ನು ಪೂಲ್‌ಚಂದ್‌ ಜಾದವ್‌ (ಟೆಂಪೋ ಚಾಲಕ), ಪರಸಪ್ಪ ಅಳಗುಡವರ್‌ (36) ಹಾಗೂ ಭಾಗೀರಥಿ (7) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಬಿಜಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಗೇವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

(ಪಿಟಿಐ/ಇನ್‌ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+