ದ್ರಾವಿಡ ಭಾಷೆಗಳ ನಿಘಂಟಿನ ಬಗ್ಗೆ ರಾಷ್ಟ್ರೀಯ ವಿಚಾರಗೋಷ್ಠಿ
ಉಡುಪಿ : ದ್ರಾವಿಡ ಭಾಷೆಗಳ ನಿಘಂಟು ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣ ಉಡುಪಿಯಲ್ಲಿ ಶುಕ್ರವಾರದಿಂದ ನಡೆಯಲಿದೆ. ಈ ಕಾರ್ಯಕ್ರಮವನ್ನು ಹಂಪಿಯ ಕನ್ನಡ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಜಂಟಿಯಾಗಿ ಆಯೋಜಿಸಿವೆ.
ಈ ಸಂದರ್ಭದಲ್ಲಿ ದ್ರಾವಿಡ ನಿಘಂಟಿನ ಬಿಡುಗಡೆಯೂ ನಡೆಯಲಿದೆ. ಈ ವಿಷಯವನ್ನು ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಇಲ್ಲಿ ತಿಳಿಸಿದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ 34ಕ್ಕೂ ಹೆಚ್ಚು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳನ್ನು ಯಶಸ್ವಿಯಾಗಿ ನಡೆಸಿದೆ ಎಂಬುದನ್ನು ಅವರು ಸ್ಮರಿಸಿದರು.
ಎರಡು ದಿನಗಳ ಕಾಲ ನಡೆಯುವ ವಿಚಾರ ಸಂಕಿರಣದ ಮೊದಲ ದಿನ ಅಣ್ಣಾಮಲೈ ವಿಶ್ವವಿದ್ಯಾಲಯದ ಪ್ರೊ. ರಾಮಕೃಷ್ಣ ಶೆಟ್ಟಿ, ಕನ್ನೂರ್ ವಿಶ್ವವಿದ್ಯಾಲಯದ ಪ್ರೊ. ಪಿ. ಶ್ರೀಕೃಷ್ಣ ಭಟ್ ಅವರು ತಮಿಳು ಮತ್ತು ಮಲಯಾಳಂ ನಿಘಂಟುಗಳ ಬಗ್ಗೆ ಪ್ರಬಂಧಗಳನ್ನು ಮಂಡಿಸಲಿದ್ದಾರೆ ಎಂದು ಅವರು ಹೇಳಿದರು.
ಎರಡನೆ ದಿನದ ಗೋಷ್ಠಿಗಳಲ್ಲಿ ಕನ್ನಡ ವಿಶ್ವವಿದ್ಯಾಲಯದ ಪ್ರೊ. ಮಾಧವ ಪೆರಾಜ್ ಅವರು ಕನ್ನಡ ನಿಘಂಟಿನ ಬಗ್ಗೆ ಪ್ರಬಂಧ ಮಂಡಿಸಿದರೆ, ಕೃಷ್ಣದೇವರಾಯ ವಿ.ವಿಯ ಪ್ರೊ. ರಾ. ಶೇಷಶಾಸ್ತ್ರಿ ಮತ್ತು ಕನ್ನಡ ವಿವಿಯ ಪ್ರೊ. ಎ.ವಿ. ನಾವಡಾ ಅವರು ಅನುಕ್ರಮವಾಗಿ ತೆಲುಗು ಮತ್ತು ತುಳು ನಿಘಂಟುಗಳ ಬಗ್ಗೆ ತಮ್ಮ ವಿಚಾರಧಾರೆ ಮಂಡಿಸಲಿದ್ದಾರೆ ಎಂದೂ ವೆಂಕಟೇಶ್ ವಿವರಿಸಿದರು.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications