ನಾಲ್ವರು ಹೆಣ್ಣು ಮಕ್ಕಳೊಂದಿಗೆ ನೀರಿಗೆ ಹಾರಿದ ಮಹಿಳೆಆತ್ಮಹತ್ಯೆ
ಕೋಲಾರ : ನಾಲ್ಕನೇ ಬಾರಿಯೂ ಹೆಣ್ಣು ಮಗುವನ್ನು ಹಡೆದು ಗಂಡನ ಮೂದಲಿಕೆಗೆ ತುತ್ತಾದ ಮಹಿಳೆಯಾಬ್ಬರು ತನ್ನ ನಾಲ್ವರು ಹೆಣ್ಣು ಮಕ್ಕಳೊಂದಿಗೆ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಂಗಾರಪೇಟೆ ತಾಲ್ಲೂಕಿನ ಮಾಗೇರಿ ಗ್ರಾಮದ ಕಾಂತಮ್ಮ ಎನ್ನುವ ಹೆಣ್ಣು ಮಗಳು ಹಾಗೂ ಕೋಲಾರ ತಾಲ್ಲೂಕಿನ ಸೂಲಿಬೆಲೆ ಗ್ರಾಮದ ನಂಜಪ್ಪ ಎನ್ನುವವರ ಮದುವೆ 15 ವರ್ಷಗಳ ಹಿಂದೆ ನಡೆದಿತ್ತು . ಮೊದಲ ಎರಡು ಮಕ್ಕಳು ಹೆಣ್ಣೇ ಆದಾಗ ನಂಜಪ್ಪ ಕೋಪಗೊಂಡಿದ್ದ .
ಮೂರನೇ ಬಾರಿಯೂ ಹೆಣ್ಣು ಮಗುವಾದಾಗ ಸಿಟ್ಟಿಗೆದ್ದ ನಂಜಪ್ಪ ಹೆಂಡತಿಯನ್ನು ಹಿಂಸೆಗೆ ಗುರಿ ಮಾಡಿದ್ದ . ನಾಲ್ಕನೇ ಬಾರಿಯೂ ಹೆಣ್ಣು ಮಗುವಾದಾಗ ಕಾಂತಮ್ಮನ ಸಂಕಟ ಇನ್ನಷ್ಟು ಹೆಚ್ಚಾಯಿತು. ಮೂದಲಿಕೆ, ಹಿಂಸೆ ಮಿತಿ ಮೀರಿದಾದ ರೋಸಿದ ಸೂರಮ್ಮ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸೋಮವಾರ ತವರಿಗೆ ಹೋಗಿ ಬರುವುದಾಗಿ ಹೊರಟ ಕಾಂತಮ್ಮ ಹಂಚಾಳ ಬಳಿಯ ನೀರಿನ ಕುಂಟೆಗೆ ಮಕ್ಕಳಾದ ಪವಿತ್ರ (14), ಮಂಜುಳ(11), ಲಕ್ಷ್ಮಿ (5) ಮತ್ತು ವಾಣಿ(3)ಯಾಂದಿಗೆ ಹಾರಿದ್ದಾಳೆ.
ಕುಂಟೆಯಲ್ಲಿ ತೇಲುತ್ತಿದ್ದ ಐವರ ಶವಗಳೂ ಬುಧವಾರ ಕುಂಟೆಯಲ್ಲಿ ತೇಲಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಂಗಾರಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications