ಜಾಗತಿಕ ಸೈಬರ್ ಅಪರಾಧ ತಡೆಗಟ್ಟಲು ಒಂದೆಡೆ ಕಲೆತ 30 ದೇಶಗಳು
ಬುಡಾಫೆಸ್ಟ್ : ಸೆಪ್ಟೆಂಬರ್ 11ರಂದು ಅಮೆರಿಕದ ಮೇಲೆ ನಡೆದ ಭಯೋತ್ಪಾದಕ ವಾಯುದಾಳಿಯ ಹಿನ್ನೆಲೆಯಲ್ಲಿ ಕಂಪ್ಯೂಟರ್ ಸಂಬಂಧಿತ ಅಪರಾಧಗಳನ್ನು ತಡೆಗಟ್ಟಲು 30 ರಾಷ್ಟ್ರಗಳು ತಮ್ಮ ಸಮ್ಮತಿ ಸೂಚಿಸಿವೆ. ಕಂಪ್ಯೂಟರ್ ಅಪರಾಧೀಕರಣ ತಡೆಗಟ್ಟುವ ಸಂಕಲ್ಪದೊಂದಿಗೆ ಈ ಎಲ್ಲ ರಾಷ್ಟ್ರಗಳೂ ಒಪ್ಪಂದಕ್ಕೆ ಸಹಿ ಹಾಕಿವೆ.
ಭಯೋತ್ಪಾದನೆ ಕೃತ್ಯಗಳ ಬಗ್ಗೆ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಇ -ಸಾಕ್ಷ್ಯ ಸಂಗ್ರಹಿಸಿ ಒದಗಿಸಲು ನೆರವಾಗುವುದು ಒಪ್ಪಂದದ ಪ್ರಮುಖ ಉದ್ದೇಶವಾಗಿದೆ. ಸೈಬರ್‌ಲೋಕದ ಅಪರಾಧೀಕರಣ ತಡೆಗಟ್ಟಲು ಅಂತಾರಾಷ್ಟ್ರೀಯ ಸಹಕಾರದ ಅಗತ್ಯವಿದೆ ಎಂಬುದನ್ನು ಮನಗಂಡ ಈ ರಾಷ್ಟ್ರಗಳು ನಾಲ್ಕು ವರ್ಷಗಳ ಸತತ ಪ್ರಯತ್ನದ ಬಳಿಕ ಒಮ್ಮತದ ಒಪ್ಪಂದಕ್ಕೆ ಅಂಕಿತ ಹಾಕಿವೆ.
ಕಾಪಿರೈಟ್, ಹಕ್ಕುಚ್ಯುತಿ, ಕಂಪ್ಯೂಟರ್ ಸಂಬಂಧಿತ ಮೋಸ ಪ್ರಕರಣ, ಅಶ್ಲೀಲತೆ, ಇಂಟರ್‌ನೆಟ್ ಭದ್ರತೆಗೆ ತೊಡಕುಂಟುಮಾಡುವುದು, ಭದ್ರತೆ ಸೇರಿದಂತೆ ಹಲವು ಬಗೆಯ ಅಪರಾಧ ನಿಗ್ರಹಕ್ಕೆ ಈ ಒಪ್ಪಂದ ಸಹಕಾರಿಯಾಗಲಿದೆ.
ಈ ವಿಷಯವನ್ನು ಜರ್ಮನಿಯ ಕ್ರಿಶ್ಚಿಯನ್ ಕ್ರೂಗರ್ ಇಲ್ಲಿ ತಿಳಿಸಿದ್ದಾರೆ. ಮಕ್ಕಳ ನಗ್ನ ಸೈಟ್‌ಗಳನ್ನು ನಿರ್ಮಿಸಿ, ಮಕ್ಕಳನ್ನು ಅಶ್ಲೀಲ ಸಾಮಗ್ರಿಯಾಗಿ ಬಳಸುವುದು ಒಪ್ಪಂದದ ರೀತ್ಯ ಘೋರ ಅಪರಾಧವಾಗಿದೆ ಎಂದೂ ಅವರು ಹೇಳಿದ್ದಾರೆ.
ಒಪ್ಪಂದಕ್ಕೆ 26 ಐರೋಪ್ಯ ರಾಷ್ಟ್ರಗಳಲ್ಲದೆ, ಜಪಾನ್, ಕೆನಡಾ, ದಕ್ಷಿಣ ಆಫ್ರೀಕಾ, ಅಮೆರಿಕ ರಾಷ್ಟ್ರಗಳು ಸಹಿ ಹಾಕಿವೆ. ಇನ್ನೂ ಹಲವಾರು ರಾಷ್ಟ್ರಗಳು ಈ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.
ಮುಖಪುಟ / ಕರ್ನಾಟಕ ಸಿಲಿಕಾನ್ ಕಣಿವೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications