ಕನ್ನಡ ಫಲಕ ಹಾಕದ 61 ಅಂಗಡಿ ಮಾಲಿಕರ ವಿರುದ್ಧ ಕ್ರಮ
ಬೆಂಗಳೂರು : ಅಂಗಡಿ ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ಫಲಕ ಹಾಕದ 61 ಮಾಲಿಕರ ವಿರುದ್ಧ ಕಾರ್ಮಿಕ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ. ಈ ವಿಷಯವನ್ನು ಕಾರ್ಮಿಕ ಆಯುಕ್ತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಫಲಕ ಪ್ರದರ್ಶಿಸದ ವಾಣಿಜ್ಯ ಮಳಿಗೆ ಮತ್ತು ಅಂಗಡಿ ಮಾಲಿಕರಿಗೆ ಈವರೆಗೆ ನ್ಯಾಯಾಲಯವು 11 ಸಾವಿರ ರುಪಾಯಿ ದಂಡ ವಿಧಿಸಿದೆ. ಈ ವರ್ಷ ಕನ್ನಡದಲ್ಲಿ ಹೆಸರು ಬರೆಸದ 61 ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕಳೆದ ನವೆಂಬರ್ನಿಂದೀಚೆಗೆ 799 ಸಂಸ್ಥೆಗಳಿಂದ ಕನ್ನಡ ಫಲಕ ಹಾಕಿಸಲಾಗಿದೆ ಎಂದೂ ಪ್ರಕಟಣೆ ಹೇಳಿದೆ.
ಎಲ್ಲ ವಾಣಿಜ್ಯ ಸಂಕೀರ್ಣ, ಮಳಿಗೆ, ಅಂಗಡಿಗಳ ಮೇಲೆ ಕಡ್ಡಾಯವಾಗಿ ಕನ್ನಡ ಫಲಕ ಇರಲೇಬೇಕು. ಈ ಕಾರ್ಯಕ್ರಮ ಜಾರಿಗೆ ತರಲು ಅಧಿಕಾರಿಗಳ ತಂಡ ರಚಿಸಲಾಗಿದೆ. ಈ ತಂಡದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತಿ ಸಮಿತಿ ಸದಸ್ಯರೂ ಇದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.
ಬೆಂಗಳೂರು ನಗರದ ಎಲ್ಲ ಬಡಾವಣೆಗಳಲ್ಲೂ ಕಡ್ಡಾಯವಾಗಿ ಕನ್ನಡ ಫಲಕ ಹಾಕುವಂತೆ ಕ್ರಮ ಕೈಗೊಳ್ಳಲಾಗುವುದು. ನಗರದ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಕನ್ನಡ ಫಲಕ ಪ್ರದರ್ಶಿಸಿ ಸಹಕರಿಸಬೇಕು ಎಂದೂ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications